ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ; ವಾರದೊಳಗೆ ಪರಿಹಾರ ಕೋರಿ ಮನವಿ: ಡಿಸಿಎಂ ಪರಮೇಶ್ವರ್; Video

ಈ ತಾಲೂಕುಗಳಲ್ಲಿ ಸ್ಥಳ ಪರಿಶೀಲನೆ ಪೂರ್ಣಗೊಂಡಿದೆ. ಉಳಿದ ತಾಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.
Dr G Parameshwar
ಡಾ ಜಿ ಪರಮೇಶ್ವರ್
Updated on: 

ಕರ್ನಾಟಕದಲ್ಲಿ ಇನ್ನೂ 9 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು. ಇದರಿಂದ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆಯಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಬುಧವಾರ ತಿಳಿಸಿದ್ದಾರೆ.

ಈ ತಾಲೂಕುಗಳಲ್ಲಿ ಸ್ಥಳ ಪರಿಶೀಲನೆ ಪೂರ್ಣಗೊಂಡಿದೆ. ಉಳಿದ ತಾಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತವೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಉಳಿದ ತಾಲೂಕುಗಳ ಪೈಕಿ ಯಾವುದಾದರೂ ನಿಗದಿತ ಮಾನದಂಡಗಳನ್ನು ಪೂರೈಸಿದರೆ, ಆ ತಾಲೂಕುಗಳಲ್ಲೂ ಸ್ಥಳ ಪರಿಶೀಲನೆ ನಡೆಸಲು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಕರ್ನಾಟಕಕ್ಕೆ ಉಂಟಾಗಿರುವ ನಷ್ಟದ ವಿವರಗಳನ್ನು ಒಳಗೊಂಡ ಅಂತಿಮ ಮನವಿಯನ್ನು ರಾಜ್ಯ ಸರ್ಕಾರ ಸಿದ್ಧಪಡಿಸುತ್ತಿದ್ದು, ಒಂದು ವಾರದೊಳಗೆ ಅದು ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

ಕರ್ನಾಟಕಕ್ಕೆ ಉಂಟಾಗಿರುವ ಒಟ್ಟು ನಷ್ಟದ ಅಂದಾಜು ದೊರೆತ ಬಳಿಕ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ನಿಧಿ (NDRF) ಮಾರ್ಗಸೂಚಿಗಳಡಿ ಎಷ್ಟು ಆರ್ಥಿಕ ನೆರವು ಕೋರಬಹುದು ಎಂಬುದನ್ನು ನಿರ್ಧರಿಸುತ್ತೇವೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ಹಾಗೂ ಇತರ ಅಧಿಕಾರಿಗಳು ದೆಹಲಿಗೆ ತೆರಳಿ ಮನವಿಯನ್ನು ಖುದ್ದಾಗಿ ಸಲ್ಲಿಸುವ ನಿಯೋಗದ ಸದಸ್ಯರನ್ನು ಅಂತಿಮಗೊಳಿಸಲಿದ್ದಾರೆ ಎಂದು ಪರಮೇಶ್ವರ್ ಹೇಳಿದರು.

ಬರದಿಂದ ಉಂಟಾಗಿರುವ ನಷ್ಟವನ್ನು ನಿಭಾಯಿಸಲು ಕರ್ನಾಟಕಕ್ಕೆ ಅಗತ್ಯವಾದ ಆರ್ಥಿಕ ನೆರವು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

Dr G Parameshwar
ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com