ಹುಬ್ಬಳ್ಳಿ: ಜಮೀನಿಗೆ ನುಗ್ಗಿದ ಖಾಸಗಿ ಬಸ್; 15 ಮಂದಿಗೆ ಗಂಭೀರ ಗಾಯ! Video

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ರಸ್ತೆಯಿಂದ ಪಕ್ಕಕ್ಕೆ ಸರಿದು ಜಮೀನಿನೊಳಗೆ ನುಗ್ಗಿದೆ ಎಂದು ಪೊಲೀಸರು ಹೇಳಿದ್ದಾರೆ.
Casual Images
ಸಾಂದರ್ಭಿಕ ಚಿತ್ರ
Updated on: 

ಹುಬ್ಬಳ್ಳಿ: ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಜಮೀನಿಗೆ ನುಗ್ಗಿದ ಪರಿಣಾಮ ಕನಿಷ್ಠ 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ಬಳಿ ಗುರುವಾರ ಮುಂಜಾನೆ ನಡೆದಿದೆ.

ಮುಂಬೈನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್, 'ಚಬ್ಬಿ ಕ್ರಾಸ್' (Chabbi Cross) ದಾಟಿದ ಸ್ವಲ್ಪ ಸಮಯದ ನಂತರ ಈ ಅಪಘಾತ ಸಂಭವಿಸಿದೆ. ಬೆಳಗಿನ ಜಾವ ಸುಮಾರು 3 ಗಂಟೆಗೆ ಅಪಘಾತವಾಗಿದೆ ಎನ್ನಲಾಗಿದೆ. ಗಾಯಗೊಂಡವರಲ್ಲಿ ಚಾಲಕ ಕೂಡ ಸೇರಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ರಸ್ತೆಯಿಂದ ಪಕ್ಕಕ್ಕೆ ಸರಿದು ಜಮೀನಿನೊಳಗೆ ನುಗ್ಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಅಪಘಾತದ ತೀವ್ರತೆಗೆ ಚಾಲಕನ ಕಾಲು ಬಸ್ಸಿನೊಳಗೆ ಸಿಲುಕಿಕೊಂಡಿತ್ತು. ಇದರಿಂದ ತೀವ್ರ ನೋವಿನಲ್ಲಿದ್ದ ಚಾಲಕ, ಹೊರಬರಲು ಪರದಾಡುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಚಾಲಕರನ್ನು ಹೊರತೆಗೆದರು. ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿ ಒಟ್ಟು 26 ಪ್ರಯಾಣಿಕರಿದ್ದರು.

ಚಾಲಕ ಸೇರಿದಂತೆ ಒಟ್ಟು 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Casual Images
ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ದುರ್ಗಾ ಮೂರ್ತಿ ಹೊತ್ತೊಯ್ಯುತ್ತಿದ್ದ 7 ಭಕ್ತರ ಸಾವು; 21 ಮಂದಿಗೆ ಗಂಭೀರ ಗಾಯ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com