ಸಕಲೇಶಪುರದಲ್ಲಿ ನೂರಾರು ವೋಟರ್ ಐಡಿ, ಆಧಾರ್ ಕಾರ್ಡ್‌ಗಳು ಬೆಂಕಿಗೆ ಆಹುತಿ: ಮತದಾರರ ಪಟ್ಟಿ ಪರಿಷ್ಕರಣೆ ಬೆನ್ನಲ್ಲೇ ಬೆಚ್ಚಿಬೀಳಿಸೋ ಘಟನೆ!

ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನೂರಾರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್‌ಗಳನ್ನು ಅಪರಿಚಿತರು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:
Dozens of voter IDs, Aadhaar cards found burnt in Sakleshpur; police launch probe amid voter list revision row
ಸಕಲೇಶಪುರದಲ್ಲಿ ನೂರಾರು ವೋಟರ್ ಐಡಿ, ಆಧಾರ್ ಕಾರ್ಡ್‌ಗಳು ಬೆಂಕಿಗೆ ಆಹುತಿOnline Desk
Updated on: 

ಸಕಲೇಶಪುರ (ಹಾಸನ): ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನೂರಾರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್‌ಗಳನ್ನು ಅಪರಿಚಿತರು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸಕಲೇಶಪುರದ ಶ್ರೀಗಂಧ ಹೋಟೆಲ್ ಸಮೀಪ ಈ ಅಧಿಕೃತ ದಾಖಲೆಗಳು ಸುಟ್ಟ ಹಾಗೂ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿವೆ. ಅದರಲ್ಲೂ, ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಈ ಘಟನೆ ಸಂಭವಿಸಿರುವುದು ತೀವ್ರ ಅನುಮಾನ ಹುಟ್ಟುಹಾಕಿದೆ. ಆ ಕುರಿತ ವರದಿ ಇಲ್ಲಿದೆ:

ವಿವಿಧ ಜಿಲ್ಲೆಗಳ ದಾಖಲೆಗಳು..

ಪತ್ತೆಯಾಗಿರುವ ಗುರುತಿನ ಚೀಟಿಗಳು ಸಕಲೇಶಪುರ ತಾಲೂಕಿಗೆ ಸೇರಿದವುಗಳಲ್ಲ. ಬದಲಿಗೆ ಕರ್ನಾಟಕದ ಹಾಸನ, ರಾಮನಗರ, ಕೊತ್ತೂರು (ವಿಜಯನಗರ), ಬಳ್ಳಾರಿ, ವಿಜಯಪುರ, ಮೈಸೂರು, ಯಾದಗಿರಿ ಮತ್ತು ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಹಾಗೂ ನೆರೆಯ ಆಂಧ್ರಪ್ರದೇಶ ಮೂಲದ ವಿಳಾಸ ಹೊಂದಿರುವ,  ಸರಿಸುಮಾರು 26ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿಗಳು ಹಾಗೂ 30 ರಿಂದ 40 ಆಧಾರ್ ಮತ್ತು ಪಾನ್ ಕಾರ್ಡ್‌ಗಳು ಸ್ಥಳದಲ್ಲಿ ಪತ್ತೆಯಾಗಿವೆ.

Dozens of voter IDs, Aadhaar cards found burnt in Sakleshpur; police launch probe amid voter list revision row
ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್‌ನ್ಯೂಸ್‌! ಮರುಪರಿಶೀಲನೆಗೆ ಮತ್ತೆ ಗಡುವು ವಿಸ್ತರಣೆ ಮಾಡಿದ ರಾಜ್ಯ ಸರ್ಕಾರ

ಇನ್ನು, ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಸಕಲೇಶಪುರ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಪೊಲೀಸರು ದಾಖಲೆಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರೊಂದಿಗೆ ಸಕಲೇಶಪುರ ಉಪವಿಭಾಧಿಕಾರಿಗಳು ಘಟನೆಯ ಕುರಿತು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಏತನ್ಮಧ್ಯೆ, ಪ್ರಾಥಮಿಕ ತನಿಖೆಯ ಮೇಲ್ನೋಟಕ್ಕೆ ಈ ಸುಡಲಾದ ದಾಖಲೆಗಳಿಗೂ ಮತ್ತು ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೂ ಯಾವುದೇ ಸಂಬಂಧ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆಯಾಗಿ, ಇಷ್ಟೊಂದು ದೊಡ್ಡ ಪ್ರಮಾಣದ ಸರ್ಕಾರಿ ಗುರುತಿನ ಚೀಟಿಗಳು ಬೇರೆ ಬೇರೆ ಕಡೆಯಿಂದ ಒಂದೇ ಸ್ಥಳಕ್ಕೆ ಹೇಗೆ ಬಂದವು ಮತ್ತು ಇದನ್ನು ಸುಟ್ಟ ದುಷ್ಕರ್ಮಿಗಳು ಯಾರು ಎಂಬುದು ತನಿಖೆಯಿಂದಷ್ಟೇ ಹೊರಬರಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com