ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಶುಭಾ ಹಾಗೂ ಅರುಣ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.
Shubha And girish
ಶುಭಾ ಮತ್ತು ಕೊಲೆಯಾದ ಗಿರೀಶ್
Updated on: 

ಬೆಂಗಳೂರು: 2003ರಲ್ಲಿ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ರಿಂಗ್ ರೋಡ್ ಶುಭಾ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಗಿರೀಶ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಶುಭಾ ಶಂಕರನಾರಾಯಣ ಮತ್ತು ಡಿ. ಅರುಣ್ ವರ್ಮಾ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಗಳನ್ನು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ತಿರಸ್ಕರಿಸಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಶುಭಾ ಹಾಗೂ ಅರುಣ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದರು.

ಶುಭಾ ಹಾಗೂ ಅರುಣ್ ವರ್ಮಾ ಕ್ಷಮಾದಾನ ಕೋರಿ ರಾಜ್ಯಪಾಲರ ಮುಂದೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಗಳ ಕುರಿತು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಸಂಪುಟ ಸಭೆ ಕ್ಷಮಾದಾನ ಅರ್ಜಿಯನ್ನು ತಿರಸ್ಕಾರ ಮಾಡಿದೆ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.

Shubha And girish
ರಿಂಗ್ ರೋಡ್ ಶುಭಾ ಕೇಸ್‌ ಗೆ ಮರು ಜೀವ: ಕ್ಷಮಾದಾನ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ!

ಅಪರಾಧದ ತೀವ್ರತೆ ಹಾಗೂ ಸಮಾಜದ ಮೇಲೆ ಬೀರಿದ ಪರಿಣಾಮವನ್ನು ಪರಿಗಣಿಸಿದ ಸಚಿವ ಸಂಪುಟ, ಯಾವುದೇ ಕಾರಣಕ್ಕೂ ಕ್ಷಮಾದಾನ ನೀಡಲು ಸಾಧ್ಯವಿಲ್ಲ ಎಂಬ ತೀರ್ಮಾನಕ್ಕೆ ಬಂದು ಅರ್ಜಿಯನ್ನು ತಿರಸ್ಕರಿಸಿದೆ. ಈ ಕ್ಷಮಾದಾನ ಅರ್ಜಿ ಇಲ್ಲಿನ ಕಾನೂನು ಚೌಕಟ್ಟಿನ ಒಳಗಿಲ್ಲ. ಕ್ಷಮಾದಾನ ಅರ್ಜಿ ತಿಸ್ಕರಿಸಿ ರಾಜ್ಯಪಾಲರಿಗೆ ಮಾಹಿತಿ ನೀಡಲಾಗುತ್ತದೆ ಎಂದು ಖರ್ಗೆ ತಿಳಿಸಿದ್ದಾರೆ.

ಜೀವಾವಧಿ ಶಿಕ್ಷೆಯನ್ನು ಸುಪ್ರೀಂ ಕೋರ್ಟ್(Supreme Court) ಎತ್ತಿಹಿಡಿದ ಬಳಿಕ, ಶಿಕ್ಷೆಯಿಂದ ವಿನಾಯಿತಿ ಹಾಗೂ ಕ್ಷಮಾದಾನ ಕೋರಿ ಶುಭಾ ಶಂಕರನಾರಾಯಣ್ ಮತ್ತು ಅರುಣ್ ವರ್ಮಾ ನೇರವಾಗಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು. ರಾಜ್ಯಪಾಲರ ಸಚಿವಾಲಯವು ನಿಯಮಾನುಸಾರ ವರದಿ ನೀಡುವಂತೆ ಗೃಹ ಇಲಾಖೆಗೆ ಈ ಕಡತವನ್ನು ಕಳುಹಿಸಿಕೊಟ್ಟಿತ್ತು. ಗೃಹ ಇಲಾಖೆಯು ಕಾರಾಗೃಹ ಅಧಿಕಾರಿಗಳು ಹಾಗೂ ಪೊಲೀಸರಿಂದ ಅಭಿಪ್ರಾಯ ಪಡೆದು ಕಡತವನ್ನು ಸಚಿವ ಸಂಪುಟದ ಮುಂದಿಟ್ಟಿತ್ತು. ಸಂಪುಟವು ಅರ್ಜಿಯನ್ನು ಸಂಪೂರ್ಣವಾಗಿ ತಳ್ಳಿಹಾಕುವ ಮೂಲಕ ಅಪರಾಧಿಗಳಿಗೆ ಶಾಕ್ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com