1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹ

ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಕೈಜೋಡಿಸಬೇಕು.
Dingaleshwara Swami
ದಿಂಗಾಲೇಶ್ವರ ಸ್ವಾಮೀಜಿಗಳು.
Updated on: 

ಹುಬ್ಬಳ್ಳಿ: ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸಿ, ಆ ಹಣವನ್ನು ಸಂಕಷ್ಟದಲ್ಲಿರುವ ರೈತರಿಗೆ ವರ್ಗಾಯಿಸಬೇಕು ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಇದೇ ವೇಳೆ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀಗಳು, ಸಭೆಗಾಗಿ ರೈತ ಮುಖಂಡರನ್ನು ದೆಹಲಿಗೆ ಕರೆಸಿಕೊಂಡು, ಅವರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದೆ ಅವಮಾನಿಸಿದ್ದಾರೆ ಎಂದು ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರೈತರ ಸಮಸ್ಯೆಗಳ ಬಗ್ಗೆ ಮೌನ ವಹಿಸಿದ್ದು, ಅವುಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಟೀಕಿಸಿದರು.

Dingaleshwara Swami
ಫಲಾನುಭವಿಗಳಿಗೆ 5 ಗ್ಯಾರಂಟಿ ಯೋಜನೆ ತಲುಪಿಸಲು ಸರ್ಕಾರದ ಹೊಸ ಹೆಜ್ಜೆ: ಗ್ರಾಮ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಸಮಿತಿ ರಚನೆಗೆ ಸೂಚನೆ..!

ಬಳಿಕ ಕಬ್ಬು ಬೆಳೆಗಾರರ ಬೇಡಿಕೆಗಳನ್ನು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವ ಪ್ರಸ್ತಾವನೆಗೂ ಆಕ್ಷೇಪ ವ್ಯಕ್ತಪಡಿಸಿದ ಅವರು, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನೇ ಇನ್ನೂ ಜಾರಿಗೆ ತಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತರಿಗೆ ನ್ಯಾಯ ದೊರೆಯುವವರೆಗೂ ಸಕ್ಕರೆ ಸೇವಿಸುವುದಿಲ್ಲ ಎಂದು ದಿಂಗಾಳೇಶ್ವರ ಸ್ವಾಮೀಜಿ ಪ್ರತಿಜ್ಞೆ ಮಾಡಿದ್ದಾರೆ. ಈ ಹಿಂದೆ ರೈತ ವಿರೋಧಿ ಮತ್ತು ಜನವಿರೋಧಿ ನಿಲುವುಗಳನ್ನು ಖಂಡಿಸಿ ಪ್ರಲ್ಹಾದ್ ಜೋಶಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದ ಸಂದರ್ಭದಲ್ಲಿ ಹಾರಗಳನ್ನು ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಅಂದಿನಿಂದ ಇಂದಿನವರೆಗೂ ಆ ನಿರ್ಧಾರವನ್ನು ಪಾಲಿಸಿಕೊಂಡು ಬಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com