Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಪಣತ್ತೂರು ಅಂಡರ್‌ಪಾಸ್​ನಲ್ಲಿ ತೇಲಾಡಿದ ಕಾರು, Video

ಇಂದು ಸಂಜೆ ಸುರಿದ ಭಾರೀ ಮಳೆಯಿಂದ ಪಣತ್ತೂರು ರೈಲ್ವೆ ಅಂಡರ್‌ಪಾಸ್ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಕಾರೊಂದು ನೀರಿನಲ್ಲಿ ತೇಲಾಡಿದ ಆತಂಕಕಾರಿ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Bengaluru’s Panathur Underpass Inundated After Brief Downpour
ಪಣತ್ತೂರು ಅಂಡರ್‌ಪಾಸ್​ನಲ್ಲಿ ತೇಲಾಡಿದ ಕಾರು
Updated on: 

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವು ಕಡೆ ಶುಕ್ರವಾರ ಸಂಜೆ ಧಾರಾಕಾರ ಮಳೆಯಾಗಿದ್ದು, ಭಾರೀ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಸಂಜೆ ಸುರಿದ ಭಾರೀ ಮಳೆಯಿಂದ ಪಣತ್ತೂರು ರೈಲ್ವೆ ಅಂಡರ್‌ಪಾಸ್ ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಕಾರೊಂದು ನೀರಿನಲ್ಲಿ ತೇಲಾಡಿದ ಆತಂಕಕಾರಿ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಮುಳುಗುತ್ತಿದ್ದಂತೆಯೇ ಚಾಲಕ ಆಚೆ ಓಡೋಡಿ ಬಂದಿದ್ದಾನೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಅದೃಷ್ಟವಶಾತ್ ಜಲಾವೃತಗೊಂಡಿರುವ ಅಂಡರ್ ಪಾಸ್​ನಲ್ಲಿ ಸಿಲುಕಿದ್ದ ಕ ದ್ವಿಚಕ್ರ ವಾಹನ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Bengaluru’s Panathur Underpass Inundated After Brief Downpour
Bengaluru Rains: ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ವಾಹನ ಸವಾರರ ಪರದಾಟ; ಮುಂದಿನ 2 ದಿನ ಮಳೆ

ರಸ್ತೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಯಾವುದೇ ಸಮರ್ಪಕ ವ್ಯವಸ್ಥೆ ಇಲ್ಲದಿರುವುದೇ ಈ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ. ಅಂಡರ್‌ಪಾಸ್‌ನಿಂದ ನೀರು ಸರಾಗವಾಗಿ ಹೊರಹೋಗಲು ಈ ಹಿಂದೆ ಸಣ್ಣ ಚರಂಡಿ ಹಾಗೂ ಪೈಪ್‌ಲೈನ್ ಅಳವಡಿಕೆ ಮಾಡಲಾಗಿತ್ತು. ಆದರೆ, ಇತ್ತೀಚೆಗೆ ಕಾಮಗಾರಿ ನೆಪದಲ್ಲಿ ಅದೇ ಪೈಪ್‌ಲೈನ್‌ಗಳ ಮೇಲೆ ರಾಶಿಗಟ್ಟಲೆ ಮಣ್ಣನ್ನು ಸುರಿದು ಮುಚ್ಚಲಾಗಿದೆ. ಮಣ್ಣಿನ ರಾಶಿ ಬಿದ್ದ ಪರಿಣಾಮ ನೀರು ಹರಿದು ಹೋಗುವ ದಾರಿ ಸಂಪೂರ್ಣ ಬಂದ್ ಆಗಿದೆ. ಇದರಿಂದಾಗಿ ಮಳೆ ಸುರಿದ ಕೆಲವೇ ಕ್ಷಣಗಳಲ್ಲಿ ನೀರು ಹೊರಹೋಗಲಾಗದೆ ಅಂಡರ್‌ಪಾಸ್ ಒಳಗೆ ನಿಂತು ಅವಾಂತರ ಸೃಷ್ಟಿಯಾಗಿದೆ.

ಇನ್ನು ಭಾರೀ ಮಳೆಯಿಂದ ನಗರದ ಪ್ರಮುಖ ರಸ್ತೆಗಳು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ನಿಂತು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ಪರದಾಟ ನಡೆಸುವಂತಾಗಿದೆ.

ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಕೆಆರ್ ಪುರಂ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com