ಸ್ಟಿಂಗ್ ಆಪರೇಷನ್ CM ಟಾರ್ಗೆಟ್: ಬೆಂಬಲಕ್ಕೆ ಬಾರದ ಸಂಪುಟ ಸಹೋದ್ಯೋಗಿಗಳು; ಹೋರಾಟದಲ್ಲಿ ಏಕಾಂಗಿಯಾದ್ರಾ ಶಿವಕುಮಾರ್?

ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ತನಿಖೆಯು ಅದೇ ರೀತಿಯಲ್ಲಿ ಮುಂದುವರಿಯಬೇಕು ಎಂದು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
Dk Shivakumar
ಡಿ.ಕೆ ಶಿವಕುಮಾರ್
Updated on: 

ಬೆಂಗಳೂರು: ಬಿಜೆಪಿ ಮತ್ತು ಜೆಡಿ(ಎಸ್) ಪಕ್ಷಗಳು 'ಸ್ಟಿಂಗ್ ಆಪರೇಷನ್' ವಿಷಯದಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದರೂ, ತಮ್ಮ ಸಂಪುಟ ಸಹೋದ್ಯೋಗಿಗಳು ಬೆಂಬಲ ನೀಡುತ್ತಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಸಚಿವ ಸಂಪುಟ ಸಭೆಯ ಆರಂಭದಲ್ಲೇ ಮುಖ್ಯಮಂತ್ರಿಯವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರು ತಮ್ಮ ಮೇಲೆ ದಾಳಿ ನಡೆಸುತ್ತಿದ್ದರೂ, ಬಹುತೇಕ ಸಚಿವರು ತಮ್ಮ ಬೆಂಬಲಕ್ಕೆ ಬರುತ್ತಿಲ್ಲ ಎಂದು ಮುಖ್ಯಮಂತ್ರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ಸಂಪುಟದಲ್ಲಿ ಒಗ್ಗಟ್ಟಿಲ್ಲ ಎಂಬ ಸಂದೇಶವನ್ನು ರವಾನಿಸುತ್ತದೆ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.

ಇನ್ನು ಮುಂದೆ ಈ ವಿಷಯದ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತ್ರ ಪ್ರತಿಕ್ರಿಯಿಸಬೇಕು, ಬೇರೆ ಯಾರೂ ಮಾತನಾಡಬಾರದು ಎಂದು ಅವರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ತನಿಖೆಯು ಅದೇ ರೀತಿಯಲ್ಲಿ ಮುಂದುವರಿಯಬೇಕು ಎಂದು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಒಂದು ವೇಳೆ ಬೇರೆ ರೀತಿಯ ತನಿಖೆಯ ಅಗತ್ಯವಿದ್ದರೆ, ಆ ನಿರ್ಧಾರವನ್ನು ಮುಖ್ಯಮಂತ್ರಿಯವರ ವಿವೇಚನೆಗೆ ಬಿಡಲಾಗಿದೆ ಎಂದು ತಿಳಿದು ಬಂದಿದೆ.

Dk Shivakumar
'ಸ್ಟಿಂಗ್ ಆಪರೇಷನ್' ವಿಡಿಯೋ ಬಿಡುಗಡೆಗೆ HDK ಸಂಚು: ಡಿ.ಕೆ. ಶಿವಕುಮಾರ್ ವಿರುದ್ಧ ಷಡ್ಯಂತ್ರ; ಚಲುವರಾಯಸ್ವಾಮಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com