ಬೆಳಗಾವಿಯಲ್ಲಿ ಕೆಫೆ ಸಿಬ್ಬಂದಿ ಮೇಲೆ ಮಚ್ಚು, ತಲವಾರುಗಳಿಂದ ದಾಳಿ: CCTVಯಲ್ಲಿ ದೃಶ್ಯ ಸೆರೆ

ದಾಳಿ ನಡೆಸಿದ ಆರೋಪಿಗಳು ಕೆಫೆಯ ಪೀಠೋಪಕರಣಗಳನ್ನೂ ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕೃತ್ಯ ಕೆಫೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
Attack in Cafe
ಕೆಪೆಯಲ್ಲಿ ದಾಳಿ
Updated on: 

ಬೆಳಗಾವಿ: ಇಲ್ಲಿನ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಗಾಲ್ಫ್ ಸೈಡ್ ಕೆಫೆಯಲ್ಲಿ ಕೈಫ್ ಶೇರ್‌ಖಾನ್ ಎಂಬ ಯುವಕನ ಮೇಲೆ ಮುಸುಕು ಧರಿಸಿದ್ದ ನಾಲ್ವರು ದುಷ್ಕರ್ಮಿಗಳು ತಲವಾರು ಮತ್ತು ಮಚ್ಚುಗಳಿಂದ ದಾಳಿ ನಡೆಸಿದ್ದಾರೆ.

ದಾಳಿ ನಡೆಸಿದ ಆರೋಪಿಗಳು ಕೆಫೆಯ ಪೀಠೋಪಕರಣಗಳನ್ನೂ ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕೃತ್ಯ ಕೆಫೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಹಳೆಯ ದ್ವೇಷವೇ ದಾಳಿಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಗಾಯಗೊಂಡ ಯುವಕನ ಸಂಬಂಧಿಕರು ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಎಪಿಎಂಸಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ನಾರಾಯಣ ಬರಮನಿ, ಆರೋಪಿಗಳನ್ನು ಬಂಧಿಸುವುದಾಗಿ ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

Attack in Cafe
ರಾಜ್ಯದ ಸ್ವೀಟ್ ಅಂಗಡಿಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ; ವ್ಯಾಪಕ ಲೋಪ ಪತ್ತೆ, 10 ಮಂದಿ ಮಾಲೀಕರಿಗೆ ನೋಟಿಸ್ ಜಾರಿ..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com