CJP ಮಾತ್ರವಲ್ಲ ಪ್ರಧಾನಿ ಮೋದಿ ವಿರುದ್ಧ ಯಾರೇ ಪ್ರತಿಭಟಿಸಿದರೂ ಕಾಂಗ್ರೆಸ್ ಹಣಕಾಸು ನೆರವು ನೀಡಲಿದೆ: ಬಿ.ಕೆ. ಹರಿಪ್ರಸಾದ್

ದೆಹಲಿಯಲ್ಲಿ ನಡೆಯುತ್ತಿರುವ CJP ಪ್ರತಿಭಟನೆಗಳಿಗೆ ಕರ್ನಾಟಕ ಸರ್ಕಾರವು ಹಣಕಾಸಿನ ನೆರವು ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.
BK Hariprasad
ಬಿ.ಕೆ ಹರಿಪ್ರಸಾದ್
Updated on: 

ಧಾರವಾಡ: ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನಡೆಯುತ್ತಿರುವ 'ಕಾಕ್ರೋಚ್ ಜನತಾ ಪಾರ್ಟಿ' ಮತ್ತು ಇತರ ಪ್ರತಿಭಟನೆಗಳಿಗೆ ಕಾಂಗ್ರೆಸ್ ಸದಸ್ಯರು ಆರ್ಥಿಕ ನೆರವು ನೀಡಲಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ಶನಿವಾರ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಹರಿಪ್ರಸಾದ್, "ಇದು ನಮ್ಮ ಹಕ್ಕು. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಲು ಬಯಸುವ, ಪ್ರಧಾನಿ ಮೋದಿ ಅವರ ವಿರುದ್ಧ ಸಿಜೆಪಿ ಅಥವಾ ಯಾವುದೇ ಇತರ ಪ್ರತಿಭಟನೆಗಳಿಗೂ ನಾವು ಹಣಕಾಸು ನೆರವು ನೀಡುತ್ತೇವೆ ಎಂದು ತಿಳಿಸಿದರು.

ದೆಹಲಿಯಲ್ಲಿ ನಡೆಯುತ್ತಿರುವ CJP ಪ್ರತಿಭಟನೆಗಳಿಗೆ ಕರ್ನಾಟಕ ಸರ್ಕಾರವು ಹಣಕಾಸಿನ ನೆರವು ನೀಡುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

CJP ಮತ್ತು ಕಾಂಗ್ರೆಸ್ ಒಂದೇ ಎಂದು ಸ್ವತಃ ಗೃಹ ಸಚಿವರೇ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ಇಲ್ಲಿ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಇವರು ಎಷ್ಟು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.

BK Hariprasad
ದೆಹಲಿಯ CJP ಹೋರಾಟಕ್ಕೆ ಕರ್ನಾಟಕದಿಂದ ಫಂಡಿಂಗ್: ಅಪ್ಪಾ, ನಮ್ಮ ಗೃಹ ಸಚಿವರೇ, ಇದು ನಿಮ್ಮ ಹೇಳಿಕೆ- ವಿಡಿಯೋ ಪ್ರದರ್ಶಿಸಿ HDK ಟಾಂಗ್

ಇದೇ ವೇಳೆ, ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವವರು ತಮ್ಮ ಸ್ವಂತ ಖರ್ಚುಗಳನ್ನು ತಾವೇ ಭರಿಸುತ್ತಿದ್ದಾರೆ ಮತ್ತು ಪಕ್ಷದ ಪ್ರತಿಭಟನೆಗೂ ಇವರ ಪ್ರತಿಭಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದರು. ಜನರು ಸ್ವಯಂಪ್ರೇರಿತರಾಗಿ ಇಲ್ಲಿಗೆ ಬಂದಿದ್ದಾರೆ ಮತ್ತು ತಮ್ಮ ಖರ್ಚುಗಳನ್ನು ತಾವೇ ನೋಡಿಕೊಳ್ಳುತ್ತಿದ್ದಾರೆ. ಎಲ್ಲರ ಬಳಿಯೂ ಹಣವಿರುವುದಿಲ್ಲ.

ಕೆಲವರು ತಮ್ಮ ಸ್ವಂತ ಸಂಪನ್ಮೂಲಗಳನ್ನು ಬಳಸಿ ಇತರ ಹತ್ತು ಜನರಿಗೆ ಸಹಾಯ ಮಾಡುತ್ತಿರಬಹುದು. ಇದಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನಮ್ಮ ಪ್ರತಿಭಟನೆ ಬೇರೆ, ಅವರ ಪ್ರತಿಭಟನೆ ಬೇರೆ," ಎಂದು ಜಾರಕಿಹೊಳಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com