ಮೈಸೂರು ದಸರಾ ವೇಳೆ ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ..!

ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ವೇಳೆ ಈ ಘಟನೆ ನಡೆದಿತ್ತು. ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಕಲಬುರಗಿಯಿಂದ ಬಂದಿದ್ದ ಕುಟುಂಬವೊಂದು ಮೈಸೂರಿನ ದಸರಾ ವಸ್ತುಪ್ರದರ್ಶನದ ಸಮೀಪದ ಟೆಂಟ್‌ನಲ್ಲಿ ವಾಸ್ತವ್ಯ ಹೂಡಿತ್ತು
Karthik
ದೋಷಿ ಕಾರ್ತಿಕ್
Updated on: 

ಮೈಸೂರು: ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ 9 ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ಅಪರಾಧಿ ಕಾರ್ತಿಕ್‌ಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ.

ಮೈಸೂರಿನ ತ್ವರಿತ ವಿಚಾರಣಾ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿಲ್ ಪಿ. ವಘಾಢೆ ಅವರು ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದ್ದಾರೆ.

ಕಳೆದ ವರ್ಷ ಮೈಸೂರು ದಸರಾ ಮಹೋತ್ಸವದ ವೇಳೆ ಈ ಘಟನೆ ನಡೆದಿತ್ತು. ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಕಲಬುರಗಿಯಿಂದ ಬಂದಿದ್ದ ಕುಟುಂಬವೊಂದು ಮೈಸೂರಿನ ದಸರಾ ವಸ್ತುಪ್ರದರ್ಶನದ ಸಮೀಪದ ಟೆಂಟ್‌ನಲ್ಲಿ ವಾಸ್ತವ್ಯ ಹೂಡಿತ್ತು. ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದ ಸಂದರ್ಭದಲ್ಲಿ ಕಾರ್ತಿಕ್ 9 ವರ್ಷದ ಬಾಲಕಿಯನ್ನು ಅಲ್ಲಿಂದ ಕರೆದೊಯ್ದು ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದ.

ಘಟನೆಗೆ ಸಂಬಂಧಿಸಿದಂತೆ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ಕೈಗೊಂಡು, ಘಟನೆ ನಡೆದ 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ್ದರು.

ಬಳಿಕ ಪ್ರಕರಣದ ವಿಚಾರಣೆ ನಡೆಸಿದ ತ್ವರಿತ ವಿಚಾರಣಾ ವಿಶೇಷ ನ್ಯಾಯಾಲಯವು ಕಾರ್ತಿಕ್‌ನ ಅಪರಾಧವನ್ನು ಸಾಬೀತುಪಡಿಸಿ, ಇದೀಗ ಮರಣದಂಡನೆ ಶಿಕ್ಷೆ ವಿಧಿಸಿದೆ.

Karthik
'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com