ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅ. 22ರ ವರೆಗೆ ಭಾರೀ ಮಳೆ; ಯೆಲ್ಲೊ ಅಲರ್ಟ್ ಘೋಷಣೆ

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ​ಮುಂಜಾಗ್ರತಾ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
Heavy Rain Across Karnataka: Yellow Alert Issued for Bengaluru and Several Districts
ಬೆಂಗಳೂರಿನಲ್ಲಿ ಮಳೆ
Updated on: 

ಬೆಂಗಳೂರು: ವಾಯುಭಾರ ಕುಸಿತದಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದ್ದು, ಭಾನುವಾರದಿಂದ ಭಾರೀ ಮಳೆಯಾಗಲಿದೆ ಎಂದು ಶನಿವಾರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ​ಮುಂಜಾಗ್ರತಾ ಕ್ರಮವಾಗಿ ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆ ಇಂದು ‘ಆರೆಂಜ್ ಅಲರ್ಟ್’ ಘೋಷಿಸಿತ್ತು. ಇದರ ಬೆನ್ನಲ್ಲೇ ಸಂಜೆ ನಗರದಾದ್ಯಂತ ಮಳೆ ಆರಂಭವಾಗಿದ್ದು, ನಾಳೆಯಿಂದ ಅಕ್ಟೋಬರ್ 22ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

Heavy Rain Across Karnataka: Yellow Alert Issued for Bengaluru and Several Districts
Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆ; ಪಣತ್ತೂರು ಅಂಡರ್‌ಪಾಸ್​ನಲ್ಲಿ ತೇಲಾಡಿದ ಕಾರು, Video

ಇಂದು ಸಂಜೆ ಬೆಂಗಳೂರಿನ ಲಾಲ್‌ಬಾಗ್, ಶಾಂತಿನಗರ, ಕಾರ್ಪೊರೇಷನ್ ವೃತ್ತ ಸೇರಿದಂತೆ ವಿವಿಧೆಡೆ ಬಿರುಸಿನ ಮಳೆ ಸುರಿಯಿತು. ಮಳೆಯಿಂದಾಗಿ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿ, ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಯಿತು.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕಡಲ ತೀರದ ಈ ಭಾಗಗಳಲ್ಲಿ ಆಗಾಗ್ಗೆ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಮತ್ತು ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com