

ಬೆಂಗಳೂರು: 2025ರ ಜುಲೈ 8ರಂದು ರಾಜ್ಯ ಸರ್ಕಾರ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಒಪ್ಪಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನದ ಟ್ರಸ್ಟ್ನ ಸಂಚಾಲಕರಾದ ಬಿ ಪಿ ನಾಗರಾಜು ಹಾಗೂ ಇತರೆ ಟ್ರಸ್ಟಿಗಳು ರಾಜ್ಯ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ದೇವಸ್ಥಾನವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆದುಕೊಂಡಿರುವ ಆದೇಶದಲ್ಲಿ ಕಾನೂನು ಲೋಪಗಳು ಇರುವ ಹಿನ್ನೆಲೆಯಲ್ಲಿ ಆದೇಶವನ್ನು ರದ್ದುಪಡಿಸಲಾಗಿದೆ.
ಕೋರ್ಟ್ ಆದೇಶ ಪ್ರಕಟಗೊಂಡ ಒಂದು ವಾರದಲ್ಲಿ ಆಡಳಿತಾಧಿಕಾರಿಯು ದೇವಸ್ಥಾನದ ಆಡಳಿತ ನಿರ್ವಹಣೆಯನ್ನು ಸಂಬಂಧಪಟ್ಟವರಿಗೆ ಬಿಟ್ಟುಕೊಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.