SSLC, PUC ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 3 ಪರೀಕ್ಷೆಗಳಿಲ್ಲ, ಕೇವಲ 2 ಮಾತ್ರ!

ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆಯು ಮಹತ್ವದ ಬದಲಾವಣೆ ತಂದಿದ್ದು, ಇನ್ಮುಂದೆ ಮೂರು ಪರೀಕ್ಷೆಗಳ ಬದಲಿಗೆ ಕೇವಲ ಎರಡು ಪರೀಕ್ಷೆಗಳನ್ನು ಮಾತ್ರ ನಡೆಸಲು ತೀರ್ಮಾನಿಸಿದೆ. ಆ ಕುರಿತ ವರದಿ ಇಲ್ಲಿದೆ:
karnataka SSLC, 2nd PUC Exam
SSLC, PUC ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆOnline Desk
Updated on: 

ಬೆಂಗಳೂರು: ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ವ್ಯವಸ್ಥೆಯಲ್ಲಿ ಶಿಕ್ಷಣ ಇಲಾಖೆಯು ಮಹತ್ವದ ಬದಲಾವಣೆ ತಂದಿದ್ದು, ಇನ್ಮುಂದೆ ಮೂರು ಪರೀಕ್ಷೆಗಳ ಬದಲಿಗೆ ಕೇವಲ ಎರಡು ಪರೀಕ್ಷೆಗಳನ್ನು ಮಾತ್ರ ನಡೆಸಲು ತೀರ್ಮಾನಿಸಿದೆ. ಈ ಮೂಲಕ ಕಳೆದ ಎರಡು ವರ್ಷಗಳಿಂದ ಜಾರಿಯಲ್ಲಿದ್ದ ಮೂರು ಮುಖ್ಯ ಪರೀಕ್ಷೆಗಳ (Exam 1, 2 & 3) ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆಯ ಮಾದರಿಯಂತೆ ಎರಡೇ ಪರೀಕ್ಷೆಗಳಿಗೆ ಮಿತಿಗೊಳಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಪರೀಕ್ಷೆಗಳ ಸಂಖ್ಯೆ ಕಡಿತಕ್ಕೆ ಕಾರಣಗಳೇನು?

ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸುವುದರಿಂದ ಇಡೀ ವರ್ಷ ಪರೀಕ್ಷೆ ಮತ್ತು ಮೌಲ್ಯಮಾಪನದಲ್ಲೇ ಕಳೆಯುತ್ತಿತ್ತು. ಇದರಿಂದ ಮುಂದಿನ ಉನ್ನತ ಶಿಕ್ಷಣದ ಪ್ರವೇಶ ಪ್ರಕ್ರಿಯೆಗಳಿಗೆ ತೊಂದರೆಯಾಗುತ್ತಿತ್ತು. ಜೊತೆಗೆ, ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶವಿದೆ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಮೊದಲ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಸಿದ್ಧತೆಯ ಶಿಸ್ತು ಮೂಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಹಾಗಾದ್ರೆ, ಹೊಸ ವೇಳಾಪಟ್ಟಿ ಹೇಗಿದೆ?

ಮುಂಬರುವ ವಾರ್ಷಿಕ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಈಗಾಗಲೇ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

  • ಪಿಯುಸಿ ಪರೀಕ್ಷೆ-1: ಫೆಬ್ರವರಿ 27 ರಿಂದ ಮಾರ್ಚ್ 17 ರವರೆಗೆ ನಡೆಯಲಿದೆ.

  • ಎಸ್‌ಎಸ್‌ಎಲ್‌ಸಿ ಪರೀಕ್ಷೆ-1: ಮಾರ್ಚ್ 22 ರಿಂದ ಏಪ್ರಿಲ್ 5 ರವರೆಗೆ ನಡೆಯಲಿದೆ.

  • ಪರೀಕ್ಷೆ-1 ಮುಗಿದ ಬಳಿಕ ತೇರ್ಗಡೆಯಾಗದ ಅಥವಾ ಅಂಕ ಸುಧಾರಿಸಬೇಕಾದ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ಪರೀಕ್ಷೆ-2 (ಕೊನೆಯ ಅವಕಾಶ) ನಡೆಸಲಾಗುತ್ತದೆ.

ಜೊತೆಗೆ, ಇನ್ಮುಂದೆ ಕೇವಲ ಎರಡು ಪರೀಕ್ಷೆಗಳು ಮಾತ್ರ ಇರುವುದರಿಂದ ವಿದ್ಯಾರ್ಥಿಗಳು ಮೊದಲ ಪರೀಕ್ಷೆಯಲ್ಲೇ ಉತ್ತಮ ಅಂಕ ಗಳಿಸಲು ಈಗಿನಿಂದಲೇ ವ್ಯವಸ್ಥಿತ ಯೋಜನೆ ರೂಪಿಸಿಕೊಳ್ಳಬೇಕು, ಪಾಠಗಳ ಪುನರಾವರ್ತನೆ ಹಾಗೂ ಮಾದರಿ ಪ್ರಶ್ನೆಪತ್ರಿಕೆಗಳ ಅಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಇಲಾಖೆ ತಿಳಿಸಿದೆ.

karnataka SSLC, 2nd PUC Exam
ರಾಜ್ಯ ಆರೋಗ್ಯ ಇಲಾಖೆ 'ಗ್ರೂಪ್ ಡಿ' ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ: 52 ನಕಲಿ ಅಂಕಪಟ್ಟಿಗಳು ಪತ್ತೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com