ದೇವರಾಯನದುರ್ಗ ಟ್ರೆಕ್ಕಿಂಗ್‌ ಹೋಗಿ ವಾಪಸ್‌ ಆಗುವಾಗ ದುರಂತ; ನೆಲಮಂಗಲ ಬಳಿ ಲಾರಿ ಡಿಕ್ಕಿಗೆ ಕೇರಳ ಮೂಲದ ಯುವತಿ ಬಲಿ

ಬೆಂಗಳೂರಿನ ನೆಲಮಂಗಲ ತಾಲೂಕಿನ ವೀರನಂಜಿಪುರ ಬಳಿ ಈ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಡಿಕ್ಕಿ ಹೊಡೆದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.
Kerala Woman, 23, Killed as Lorry Hits Motorcycle Near Bengaluru
ನೆಲಮಂಗಲ ಅಪಘಾತದಲ್ಲಿ ಸಾವನ್ನಪ್ಪಿದ ಅಲಿನಾ
Updated on: 

ಬೆಂಗಳೂರು: ದೇವರಾಯನದುರ್ಗ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಮುಗಿಸಿ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಬೆಂಗಳೂರಿಗೆ ಮರಳುತ್ತಿದ್ದ ಕೇರಳ ಮೂಲದ 23 ವರ್ಷದ ಯುವತಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನ ನೆಲಮಂಗಲ ತಾಲೂಕಿನ ವೀರನಂಜಿಪುರ ಬಳಿ ಈ ಅಪಘಾತ ಸಂಭವಿಸಿದ್ದು, ಲಾರಿ ಚಾಲಕ ಡಿಕ್ಕಿ ಹೊಡೆದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಮೂಲಗಳ ಪ್ರಕಾರ ಮೃತ ಯುವತಿಯನ್ನು ಅಲಿನಾ (23) ಎಂದು ಗುರುತಿಸಲಾಗಿದೆ. ಅಲಿನಾ ತನ್ನ ಸ್ನೇಹಿತ ಅಲ್ಬಿನ್‌ ಜೊತೆ ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದರು.

ಅಲ್ಲಿಂದ ಬೆಂಗಳೂರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಲಾರಿಯೊಂದು ಅವರು ಪ್ರಯಾಣಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಲಿನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಬೈಕ್‌ನಲ್ಲಿದ್ದ ಅಲ್ಬಿನ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲಿನಾ ಮತ್ತು ಅಲ್ಬಿನ್‌ ಇಬ್ಬರೂ ಕೇರಳ ಮೂಲದವರಾಗಿದ್ದು, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿನ ಇಂದಿರಾನಗರದಲ್ಲಿರುವ ಪೇಯಿಂಗ್‌ ಗೆಸ್ಟ್‌ (ಪಿಜಿ) ವಸತಿಯಲ್ಲಿ ವಾಸವಿದ್ದರು ಎಂದು ವರದಿಯಾಗಿದೆ.

Kerala Woman, 23, Killed as Lorry Hits Motorcycle Near Bengaluru
ದಾವಣಗೆರೆ: ಬಡಾ ಕ್ರಾಸಾ ಬಳಿ ಭೀಕರ ಅಪಘಾತ; CNG ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸಾವು! Video

ಅಪಘಾತದ ಬಳಿಕ ಲಾರಿ ಚಾಲಕ ಪರಾರಿ

ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಚಾಲಕ ವಾಹನ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಚಾಲಕನ ಗುರುತು ಪತ್ತೆಹಚ್ಚಲು ಹಾಗೂ ಲಾರಿಯನ್ನು ಪತ್ತೆ ಮಾಡಲು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಲಿನಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ.

ನೆಲಮಂಗಲ ಸಂಚಾರ ಪೊಲೀಸರು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತಕ್ಕೆ ಕಾರಣ ಹಾಗೂ ಪರಾರಿಯಾಗಿರುವ ಲಾರಿ ಚಾಲಕನ ಪತ್ತೆ ಕುರಿತು ಮುಂದಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com