ಸ್ಪಾ ಮಾಲೀಕರಿಗೆ ಬೆದರಿಕೆ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ 1 ಲಕ್ಷ ರೂ ಸುಲಿಗೆ ಆರೋಪ: ನಾಲ್ವರ ಸಹಿತ 6 ಮಂದಿ ಅರೆಸ್ಟ್‌

ಬಂಧಿತ ಆರೋಪಿಗಳಿಂದ 80 ಸಾವಿರ ರೂ ನಗದು, ಏಳು ಮೊಬೈಲ್‌ ಫೋನ್‌ಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದಾರೆ ಎನ್ನಲಾದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Six people held for threatening spa owner
ಸ್ಪಾ ಮಾಲೀಕರಿಗೆ ಬೆದರಿಕೆ ಪ್ರಕರಣ
Updated on: 

ಬೆಂಗಳೂರು: ಸಂಘಟನೆ ಹಾಗೂ ಮಾಧ್ಯಮ ಪ್ರತಿನಿಧಿಗಳೆಂದು ಹೇಳಿಕೊಂಡು ಸ್ಪಾ ಮಾಲೀಕನಿಗೆ ಬೆದರಿಕೆ ಹಾಕಿ, ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ 1 ಲಕ್ಷ ರೂ ಸುಲಿಗೆ ಮಾಡಿದ ಆರೋಪದಡಿ ನಾಲ್ವರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ 80 ಸಾವಿರ ರೂ ನಗದು, ಏಳು ಮೊಬೈಲ್‌ ಫೋನ್‌ಗಳು, ಒಂದು ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದಾರೆ ಎನ್ನಲಾದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿದ್ಯಾರಣ್ಯಪುರದ ಸಾಯಿ ನಗರದ ನಿವಾಸಿಯೊಬ್ಬರು ಅಕ್ಟೋಬರ್‌ 4ರಂದು ವಿದ್ಯಾರಣ್ಯಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ದೂರುದಾರರು ನಂಜಪ್ಪ ಲೇಔಟ್‌ನ ವಿದ್ಯಾರಣ್ಯಪುರ ಮುಖ್ಯರಸ್ತೆಯಲ್ಲಿ ಸ್ಪಾ ಮತ್ತು ಸಲೂನ್‌ ನಡೆಸುತ್ತಿದ್ದಾರೆ.

Six people held for threatening spa owner
ಮೈಸೂರು ದಸರಾ ವೇಳೆ ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ..!

ಅಕ್ರಮ ಚಟುವಟಿಕೆ ಆರೋಪ

ಅಕ್ಟೋಬರ್‌ 3ರ ರಾತ್ರಿ ಆರು ಮಂದಿ ಅಪರಿಚಿತರು ಸ್ಪಾಗೆ ಆಗಮಿಸಿ, ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿ ಸಿಬ್ಬಂದಿಯನ್ನು ಪ್ರಶ್ನಿಸಿದ್ದಾರೆ. ಬಳಿಕ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಅಕ್ರಮ ಚಟುವಟಿಕೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ನಂತರ ಸ್ಪಾ ಮಾಲೀಕನಿಗೆ 5 ಲಕ್ಷ ರೂ ನೀಡುವಂತೆ ಬೇಡಿಕೆಯಿಟ್ಟ ಆರೋಪಿಗಳು, ಬಲವಂತವಾಗಿ 1 ಲಕ್ಷ ರೂ ಪಡೆದು ಸ್ಥಳದಿಂದ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ವಿವಿಧ ಸುಳಿವುಗಳನ್ನು ಆಧರಿಸಿ ಹಾಗೂ ಮಾಹಿತಿದಾರರಿಂದ ಮಾಹಿತಿ ಸಂಗ್ರಹಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದರು.

ಅಕ್ಟೋಬರ್‌ 6ರಂದು ಕೆ.ಆರ್‌. ಸರ್ಕಲ್‌ ಸಮೀಪ ಆರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com