ಕಲಬುರಗಿ: ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾ ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ವುಲ್ ಮಲೀಕ್ ಎಂಬ ವ್ಯಕ್ತಿಯನ್ನು ಕೇಂದ್ರ ಗುಪ್ತಚರ ಇಲಾಖೆ ಹಾಗೂ ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಏನಿದು ಘಟನೆ?
ತನ್ನ ಸಹೋದರನ ಜೊತೆ ಸೇರಿ ಕಲಬುರಗಿಯ ಸರಾಫ್ ಬಜಾರ್ನ ಚಿನ್ನಾಭರಣ ಅಂಗಡಿಯಲ್ಲಿ ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಮಮ್ತಾಜ್ವುಲ್ ಮಲೀಕ್, ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಯಾದ ಲಷ್ಕರ್-ಎ-ತೈಬಾ (LeT) ಜೊತೆಗೆ ಸಂಪರ್ಕದಲ್ಲಿದ್ದ ಹಾಗೂ ಮೆಸೇಜ್ಗಳ ಮುಖಾಂತರ ಹಲವು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದ ಎಂದು ಹೇಳಲಾಗಿದೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪ್ರಸ್ತುತ ತನಿಖಾ ಸಂಸ್ಥೆಗಳು ಆತನನ್ನು ತೀವ್ರ ವಿಚಾರಣೆ ನಡೆಸುತ್ತಿವೆ.
ಏತನ್ಮಧ್ಯೆ, ಇದಕ್ಕೂ ಕೆಲ ದಿನಗಳ ಮುನ್ನ ಕಲಬುರಗಿಯಲ್ಲಿ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ವಶಕ್ಕೆ ಪಡೆಯಲಾಗಿತ್ತು.