ಕಬ್ಬು ಬೆಳೆಗಾರರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತುಕತೆ: ಸಂಧಾನ ಯಶಸ್ವಿ?; Video

ಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ದರ ನಿಗದಿಪಡಿಸಬೇಕು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆಜಿಗೆ 60 ರೂಪಾಯಿಗೆ ಹೆಚ್ಚಿಸಬೇಕು ಹಾಗೂ ಎಥೆನಾಲ್ ಬೆಲೆಯನ್ನು ಪರಿಷ್ಕರಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.
Union Minister Pralhad Joshi meets sugarcane farmers in Hubballi
ಕಬ್ಬು ಬೆಳೆಗಾರರೊಂದಿಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತುಕತೆ
Updated on: 

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ಕಬ್ಬು ಬೆಳೆಗಾರರ ನಡುವಿನ ಮಹತ್ವದ ಸಭೆ ನಿನ್ನೆ ಭಾನುವಾರ ತಡರಾತ್ರಿ ಹುಬ್ಬಳ್ಳಿಯ ಇನ್‌ಸ್ಪೆಕ್ಷನ್ ಬಂಗಲೆ (IB)ಯಲ್ಲಿ ನಡೆಯಿತು.

ಕಬ್ಬು ಬೆಳೆಗಾರರ ಸಮಸ್ಯೆಗಳು ಮತ್ತು ಬೇಡಿಕೆಗಳ ಕುರಿತು ಚರ್ಚಿಸಲು ಚುನ್ನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿ ಸೇರಿದಂತೆ ಎಂಟು ರೈತ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಂಸದ ಜಗದೀಶ್ ಶೆಟ್ಟರ್, ಶಾಸಕ ಮಹೇಶ್ ಟೆಂಗಿನಕಾಯಿ ಹಾಗೂ ಸಿ.ಸಿ. ಪಾಟೀಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೂ ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಕೇಂದ್ರ ಸಚಿವರೊಂದಿಗೆ ಮಾತನಾಡಿದ ರೈತ ಮುಖಂಡ ಚುನ್ನಪ್ಪ ಪೂಜೇರಿ, ತಮ್ಮ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಬಾರದು ಎಂದು ಮನವಿ ಮಾಡಿದರು.

ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 5,500 ರೂಪಾಯಿ ದರ ನಿಗದಿಪಡಿಸಬೇಕು, ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ಪ್ರತಿ ಕೆಜಿಗೆ 60 ರೂಪಾಯಿಗೆ ಹೆಚ್ಚಿಸಬೇಕು ಹಾಗೂ ಎಥೆನಾಲ್ ಬೆಲೆಯನ್ನು ಪರಿಷ್ಕರಿಸಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು, ಬೆಳಗಾವಿ ಸಮೀಪ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ದಿನಗಳ ಕಾಲ ರಸ್ತೆ ತಡೆ ನಡೆಸಿದ ಬಳಿಕ, ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನಿವಾಸದತ್ತ ಪಾದಯಾತ್ರೆ ಆರಂಭಿಸಿದ್ದರು.

ರೈತರ ಬೇಡಿಕೆಗಳನ್ನು ಪರಿಶೀಲಿಸಲು ಕೇಂದ್ರ ಸರ್ಕಾರ ಸಮಿತಿಯನ್ನು ರಚಿಸಿದ್ದರೂ, ಬೇಡಿಕೆಗಳನ್ನು ಈಡೇರಿಸುವ ಕುರಿತು ಸ್ಪಷ್ಟ ಭರವಸೆ ನೀಡದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವರ ನಿವಾಸದ ಎದುರೇ ಪ್ರತಿಭಟನೆ ಮುಂದುವರಿಸಲು ರೈತರು ನಿರ್ಧರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com