ಪಾಕ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆ; ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಬಂಧನ

ಕೇಂದ್ರ ಗುಪ್ತಚರ ಸಂಸ್ಥೆಯ ಸುಳಿವಿನ ಮೇರೆಗೆ, ಪೊಲೀಸರು ಕಾರ್ಯಾಚರಣೆ ಕೈಗೊಂಡು ಪಶ್ಚಿಮ ಬಂಗಾಳ ಮೂಲದ ಮುಮ್ತಾಜ್-ಉಲ್-ಮಲಿಕ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಬಂಧಿಸಿದ್ದಾರೆ.
Representative Image
ಪ್ರಾತಿನಿಧಿಕ ಚಿತ್ರ
Updated on: 

ಕಲಬುರಗಿ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ಕಳೆದ 2 ವರ್ಷಗಳಿಂದ ಕಲಬುರಗಿಯಲ್ಲಿ ವಾಸಿಸುತ್ತಿರುವ ಮುಮ್ತಾಜ್-ಉಲ್-ಮಲಿಕ್ ಎಂಬಾತನನ್ನು ಶನಿವಾರ ತಡರಾತ್ರಿ ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಕೇಂದ್ರ ಗುಪ್ತಚರ ಸಂಸ್ಥೆಯ ಸುಳಿವಿನ ಮೇರೆಗೆ, ಪೊಲೀಸರು ಕಾರ್ಯಾಚರಣೆ ಕೈಗೊಂಡು ಪಶ್ಚಿಮ ಬಂಗಾಳ ಮೂಲದ ಮುಮ್ತಾಜ್-ಉಲ್-ಮಲಿಕ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಮುಮ್ತಾಜ್-ಉಲ್-ಮಲಿಕ್ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ಆಭರಣ ತಯಾರಿಕೆ ವ್ಯವಹಾರದಲ್ಲಿ ತೊಡಗಿದ್ದರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಗೆ ಸಂಬಂಧಿಸಿದ ಸಾಮಾಜಿಕ ಮಾಧ್ಯಮ ಖಾತೆಗಳೊಂದಿಗೆ ಅವರು ಸಂಪರ್ಕ ಹೊಂದಿದ್ದರು ಮತ್ತು ಸಂದೇಶಗಳ ಮೂಲಕ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಹೀಗಾಗಿ, ಅಧಿಕಾರಿಗಳು ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರ ಗುಪ್ತಚರ ಸಂಸ್ಥೆ ಮತ್ತು ಕರ್ನಾಟಕ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಮಾಹಿತಿ ಆಧಾರದ ಮೇಲೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಂತರ, ಒಬ್ಬ ವ್ಯಕ್ತಿಗೆ ಯಾವುದೇ ಸಂಪರ್ಕವಿಲ್ಲ ಎಂದು ತಿಳಿದುಬಂದ ಕಾರಣ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ವಿಚಾರಣೆಯ ನಂತರ, ಮಮ್ತಾಜ್-ಉಲ್-ಮಲಿಕ್ ಮಾತ್ರ ಉಗ್ರಗಾಮಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದನೆಂದು ತಿಳಿದುಬಂದಿದೆ.

Representative Image
'ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ' ಆರೋಪ: ಬೀದರ್ ಯುವಕನ ಬಂಧಿಸಿದ NIA; ವಿಚಾರಣೆಗಾಗಿ ಬೆಂಗಳೂರಿಗೆ ಶಿಫ್ಟ್..!

ಮುಮ್ತಾಜ್-ಉಲ್-ಮಲಿಕ್ ಪಶ್ಚಿಮ ಬಂಗಾಳದವ ಎಂಬುದು ದೃಢಪಟ್ಟಿದೆ. ನಾವು ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಭಾರತ ಸರ್ಕಾರದ ಸಮನ್ವಯದೊಂದಿಗೆ ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಗೃಹ ಸಚಿವರು ಹೇಳಿದರು.

ಇತರ ರಾಜ್ಯಗಳಿಂದ ಅನೇಕ ಜನರು ಉದ್ಯೋಗಕ್ಕಾಗಿ ಇಲ್ಲಿಗೆ ಬರುತ್ತಾರೆ; ಅದು ಅವರ ಹಕ್ಕು, ಮತ್ತು ಅದನ್ನು ತಡೆಯಲು ಸಾಧ್ಯವಿಲ್ಲ. ಆದಾಗ್ಯೂ, ಇಲ್ಲಿ ಕೆಲಸ ಮಾಡುತ್ತಿರುವ ಇತರ ರಾಜ್ಯಗಳ ವ್ಯಕ್ತಿಗಳ ಬಗ್ಗೆ ನಾವು ಮಾಹಿತಿ ಕೋರಿದ್ದೆವು, ಆದರೆ ಯಾರೂ ಅದನ್ನು ಒದಗಿಸಿಲ್ಲ ಎಂದರು.

ಹಬ್ಬದ ನಂತರ, ವಿವಿಧ ವ್ಯವಹಾರಗಳ ಮಾಲೀಕರು, ಇ-ಕಾಮರ್ಸ್ ಪ್ರತಿನಿಧಿಗಳು ಮತ್ತು ಹೋಂಸ್ಟೇ ನಿರ್ವಾಹಕರೊಂದಿಗೆ ಸಭೆ ನಡೆಸಿ ಅವರ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು (SOP ಗಳು) ಖಚಿತಪಡಿಸಿಕೊಳ್ಳಲು ನಾವು ಸಭೆ ನಡೆಸುತ್ತೇವೆ ಎಂದು ಹೇಳಿದರು.

ಆಗಸ್ಟ್‌ನಲ್ಲಿ, ಕಲಬುರಗಿ ಪೊಲೀಸರು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಮತ್ತು ಸಲ್ಮಾನ್ ಎಂಬ ಇಬ್ಬರು ವ್ಯಕ್ತಿಗಳನ್ನು ಭಯೋತ್ಪಾದಕ ಚಟುವಟಿಕೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ವಶಕ್ಕೆ ಪಡೆದಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com