

ತುಮಕೂರು: ತುಮಕೂರು ದಸರಾ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವಿನ್ ರಚಿತಾ ರಾಮ್ ಅಹಿತರ ಸನ್ನಿವೇಶ ಎದುರಿಸಿದ್ದಾರೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಬಂದ ಅಭಿಮಾನಿಯೊಬ್ಬ ಹುಚ್ಚಾಟ ನಡೆಸಿದ್ದಾನೆ.
ರಚಿತಾ ರಾಮ್ ಅವರ ಹೆಗಲ ಮೇಲೆ ಕೈ ಹಾಕಿ ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಈ ವೇಳೆ ನಟಿಯನ್ನು ಎಳೆದಾಡಿದ್ದು, ಅತಿರೇಕದ ವರ್ತನೆ ತೋರಿದ್ದಾನೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಆತನನ್ನು ಹಿಡಿದಿದ್ದಾರೆ.
ಹೌದು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಿನ್ನೆ ರಾತ್ರಿ ಆಯೋಜಿಸಿದ್ದ ದಸರಾ ಕಾರ್ಯಕ್ರಮ ವೇಳೆ ಈ ಘಟನೆ ನಡೆದಿದೆ.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟಿ ರಚಿತಾ ರಾಮ್, ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅಶ್ವಿಜಾ ಅವರ ಜೊತೆ ರ‍್ಯಾಂಪ್ ವಾಕ್ ಮಾಡಿದ್ದಾರೆ.
ಅಭಿಮಾನಿಗಳ ನಡುವೆ ನಿರ್ಮಿಸಿದ್ದ ರ್ಯಾಂಪ್ ವಾಕ್ ಟ್ರ್ಯಾಕ್‌ನಲ್ಲಿ ನಟಿ ಹೆಜ್ಜೆ ಹಾಕುತ್ತಿದ್ದಾಗ, ಅಭಿಮಾನಿಯೊಬ್ಬ ಏಕಾಏಕಿ ಸ್ಟೇಜ್ ಮೇಲೆ ಬಂದಿದ್ದಾನೆ.ರಚಿತಾ ರಾಮ್ ಅವರ ಹೆಗಲ ಮೇಲೆ ಕೈ ಹಾಕಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ.
ಈ ವೇಳೆ ನಟಿಯನ್ನು ಎಳೆದಾಡಿದ್ದಾನೆ. ಘಟನೆ ನಡೆಯುತ್ತಿದ್ದಂತೆ ಪೊಲೀಸರು ಅಭಿಮಾನಿಯನ್ನು ಹಿಡಿದಿದ್ದಾರೆ.