ವಿಧಾನಸೌಧವನ್ನೇ ಸ್ಪೋಟಿಸಿದೆ ಎಂದ ಕಿಡಿಗೇಡಿ: AI ವಿಡಿಯೋ ವಿರುದ್ಧ ಸಾರ್ವಜನಿಕರ ಕಿಡಿ

ಕರ್ನಾಟಕದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಬಾಂಬ್ ಇಟ್ಟು ಉಡಾಯಿಸಿದಂತೆ ಎಐ ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಕರ್ನಾಟಕದ ಶಕ್ತಿಕೇಂದ್ರ ವಿಧಾನಸೌಧಕ್ಕೆ ಬಾಂಬ್ ಇಟ್ಟು ಉಡಾಯಿಸಿದಂತೆ ಎಐ ಬಳಸಿ ಎಡಿಟ್ ಮಾಡಿದ ವೀಡಿಯೊವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. Jnx king Hg ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕಿಡಿಗೇಡಿಯೊಬ್ಬ ಈ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾನೆ.

ವಿಧಾನಸೌಧದ ಮುಂದೆ ನಿಂತ ವಿಡಿಯೋ ಶೂಟ್ ಮಾಡಿಕೊಂಡಿದ್ದು ಅದನ್ನು ಎಐ ತಂತ್ರಜ್ಞಾನ ಬಳಸಿ ಬಾಂಬ್ ಬ್ಲಾಸ್ಟ್ ಮಾಡಿದಂತೆ ಎಡಿಟ್ ಮಾಡಿ ವಿಡಿಯೋ ಫೋಸ್ಟ್ ಮಾಡಿದ್ದಾನೆ. ಅಲ್ಲದೆ ವಿಧಾನಸೌಧವನ್ನು ಬಾಂಬ್‌ನಿಂದ ಉಡಾಯಿಸಿದ್ದಾಗಿ ಬರೆದುಕೊಂಡಿದ್ದಾನೆ.

ಸಂಗ್ರಹ ಚಿತ್ರ
ತುಮಕೂರು ದಸರಾ: ನಟಿ ರಚಿತಾ ರಾಮ್ ಹೆಗಲ ಮೇಲೆ ಕೈ ಹಾಕಿ ಅಭಿಮಾನಿ ಹುಚ್ಚಾಟ!

ಈ ವಿಡಿಯೋ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧಕ್ಕೆ ಈ ರೀತಿ ಬೆದರಿಕೆ ಒಡ್ಡುವ ವಿಡಿಯೋ ಪ್ರಸಾರ ಮಾಡಿರುವ ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com