ಬೆಳಗಾವಿ: ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ; ಆಸ್ಪತ್ರೆಗೆ ದಾಖಲು!

ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಜಾತ್ರೆಯಲ್ಲಿ ಶೇಲ್ಲೆವ್ವಾ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಬುಧವಾರ ನಡೆದಿದೆ.
Over 100 Devotees fall ill after consuming Prasada at a fair in Belagavi
ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ
Updated on: 

ಬೆಳಗಾವಿ: ರಾಜ್ಯಾದ್ಯಂತ ದಸರಾ ಹಬ್ಬದ ಸಂಭ್ರಮದ ನಡುವೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ.

ಚಿಕ್ಕೋಡಿ ತಾಲೂಕಿನ ಜೋಡಟ್ಟಿ ಗ್ರಾಮದ ಜಾತ್ರೆಯಲ್ಲಿ ಶೇಲ್ಲೆವ್ವಾ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿರುವ ಘಟನೆ ಬುಧವಾರ ನಡೆದಿದೆ.

ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರಿಗೆ ವಾಂತಿ-ಭೇದಿ ಶುರುವಾಗಿದ್ದು, ತಕ್ಷಣ ಅಸ್ವಸ್ಥರನ್ನು ಕಬ್ಬೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ 71 ಜನ ಡಿಸ್ಚಾರ್ಜ್ ಆಗಿದ್ದರೆ, ಉಳಿದ ಸುಮಾರು 30 ಜನರಿಗೆ ಚಿಕಿತ್ಸೆ ಮುಂದುವರಿದಿದೆ.

Over 100 Devotees fall ill after consuming Prasada at a fair in Belagavi
ಬೆಳಗಾವಿಯಲ್ಲಿ 100 ಕೋಟಿ ರೂ ವೆಚ್ಚದಲ್ಲಿ ಗಾಂಧೀಜಿ ಸ್ಮಾರಕ ನಿರ್ಮಾಣ- ಸಿಎಂ ಘೋಷಣೆ!

ಸ್ಥಳಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಸಾದ ತಯಾರಿಕೆಯಲ್ಲಿ ಬಳಸಿದ ಆಹಾರ ಪದಾರ್ಥಗಳು, ನೀರು ಹಾಗೂ ವಿತರಣೆಯ ವೇಳೆ ಅನುಸರಿಸಿದ ಸ್ವಚ್ಛತಾ ಕ್ರಮಗಳ ಕುರಿತು ಪರಿಶೀಲನೆ ನಡೆಸುವ ಅಗತ್ಯವಿದೆ. ಆಹಾರ ಅಥವಾ ನೀರಿನ ಗುಣಮಟ್ಟದ ಬಗ್ಗೆ ಪರೀಕ್ಷೆ ನಡೆಸಿದ ಬಳಿಕವೇ ಅಸ್ವಸ್ಥತೆಗೆ ನಿಖರ ಕಾರಣ ತಿಳಿಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com