ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ: ರೊಚ್ಚಿಗೆದ್ದ ಸೋಮಣ್ಣನ ಆಕ್ರೋಶಕ್ಕೆ ದಿಕ್ಕಾಪಾಲಾಗಿ ಓಡಿದ ಜನ, Video

ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ ಸಿಕ್ಕಿದ್ದು ಚಾಮುಂಡಿ ದೇವಿಯನ್ನು ಹೊತ್ತ ಕ್ಯಾಪ್ಟನ್ ಪ್ರಶಾಂತ ರಾಜಗಾಂಭೀರ್ಯವಾಗಿ ಹೆಜ್ಜೆಯಾಗುತ್ತಿದ್ದರೆ ಅತ್ತ ಶಿವಮೊಗ್ಗದಲ್ಲಿ ದಸರಾ ಜಂಬೂಸವಾರಿ ವೇಳೆ 450 ಕೆಜಿ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಆನೆ ಸೋಮಣ್ಣ ದಿಕ್ಕಾಪಾಲಾಗಿ ಓಡಿತು.
ಸೋಮಣ್ಣ ಆನೆ
ಸೋಮಣ್ಣ ಆನೆ
Updated on: 

ಶಿವಮೊಗ್ಗ: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ ಸಿಕ್ಕಿದ್ದು ಚಾಮುಂಡಿ ದೇವಿಯನ್ನು ಹೊತ್ತ ಕ್ಯಾಪ್ಟನ್ ಪ್ರಶಾಂತ ರಾಜಗಾಂಭೀರ್ಯವಾಗಿ ಹೆಜ್ಜೆಯಾಗುತ್ತಿದ್ದರೆ ಅತ್ತ ಶಿವಮೊಗ್ಗದಲ್ಲಿ ದಸರಾ ಜಂಬೂಸವಾರಿ ವೇಳೆ 450 ಕೆಜಿ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಆನೆ ಸೋಮಣ್ಣ ದಿಕ್ಕಾಪಾಲಾಗಿ ಓಡಿದ್ದು ಇದರಿಂದ ಹೆದರಿದ ಜನ ದಿಕ್ಕಾಪಾಲಾಗಿ ಓಡಿದ್ದಾರೆ.

ಶಿವಮೊಗ್ಗದ ಶಿವಪ್ಪನಾಯಕ ಅರಮನೆಯಿಂದ ಜಂಬೂ ಸವಾರಿ ಆರಂಭವಾಗಿತ್ತು. ಸ್ವಲ್ಪ ದೂರ ಹೋಗುತ್ತಿದ್ದಂತೆ ಕೋಟೆ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸೋಮಣ್ಣ ಆನೆ ಅಡ್ಡಾದಿಡ್ಡಿಯಾಗಿ ಓಡಿದ್ದು ಅಂಬಾರಿ ಜಾರಿ ಬಿದ್ದಿದೆ. ಇನ್ನು ಆನೆ ಆರ್ಭಟಕ್ಕೆ ಕಾರುಗಳು ಹಾಗೂ ಬೈಕ್ ಗಳನ್ನು ಜಖಂಗೊಂಡಿವೆ. ಆನೆಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಅದಕ್ಕೆ ಅರವಳಿಕೆ ಚುಚ್ಚುಮದ್ದು ನೀಡಲಾಗಿತ್ತು. ಸದ್ಯ ಆನೆ ನಿಯಂತ್ರಣಕ್ಕೆ ಬಂದಿದ್ದು ಸದ್ಯ ಜಂಬೂ ಸವಾರಿಯನ್ನು ಸ್ಥಗಿತಗೊಳಿಸಲಾಗಿದೆ.

ಸೋಮಣ್ಣ ಆನೆ
ದಸರಾ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ; ಮೈಸೂರು ಪೇಟ ಧರಿಸಿ ನಂದಿಧ್ವಜ ಪೂಜೆ ನೆರವೇರಿಸಿದ ಸಿಎಂ; Live Video

ಮೊದಲಿಗೆ ಸಾಗರ್‌ ಆನೆಗೆ ಅಂಬಾರಿ ಹೊರಲು ತರಬೇತಿ ನೀಡಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಸಾಗರ್‌ ಆನೆಗೆ ಕಾಲು ನೋವು ಕಾಣಿಸಿಕೊಂಡಿದ್ದರಿಂದ ಸೋಮಣ್ಣ ಆನೆಗೆ ಮೊದಲ ಬಾರಿಗೆ ಅಂಬಾರಿ ಹೊರಿಸಲು ನಿರ್ಧರಿಸಲಾಗಿದ್ದು ಈ ಅವಘಡಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com