ಚಿತ್ರದುರ್ಗ: ಲಾರಿಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಚಾಲಕ, ಪ್ರಯಾಣಿಕ ಸಾವು; 15ಕ್ಕೂ ಹೆಚ್ಚು ಮಂದಿಗೆ ಗಾಯ

ಮೃತರನ್ನು ಬಸ್ ಚಾಲಕ ಬಾಪು ಪಾಟೀಲ್ (36) ಹಾಗೂ ಪ್ರಯಾಣಿಕ ಗಗನ್(14) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
Two Killed, 15 Injured After KSRTC Bus Collides With Truck In Chitradurga
ಲಾರಿಗೆ KSRTC ಬಸ್ ಡಿಕ್ಕಿ
Updated on: 

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ಗುರುವಾರ ಕೆಎಸ್‌ಆರ್‌ಟಿಸಿ ಬಸ್(KSRTC Bus),ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಬಸ್ ಚಾಲಕ ಹಾಗೂ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮೃತರನ್ನು ಬಸ್ ಚಾಲಕ ಬಾಪು ಪಾಟೀಲ್ (36) ಹಾಗೂ ಪ್ರಯಾಣಿಕ ಗಗನ್(14) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಓರ್ವ ಗಾಯಾಳು ಪ್ರಯಾಣಿಕ ರಾಜು ನಾಯ್ಕ ಅವರ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್ನಲ್ಲಿ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Two Killed, 15 Injured After KSRTC Bus Collides With Truck In Chitradurga
ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್, ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ಮೂವರು ದುರ್ಮರಣ!

ಘಟನಾ ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com