ಮನೆಗೆ ನುಗ್ಗಿ ಜೀವ ಬೆದರಿಕೆ: ಡಿಬಾಸ್ ಪತ್ನಿ ವಿಜಯಲಕ್ಷ್ಮಿ ವಿರುದ್ಧ ನಟ ಧನ್ವೀರ್‌ ತಂದೆಯಿಂದ ದೂರು!

ಮನೆಗೆ ನುಗ್ಗಿ ಗಲಾಟೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ಎನ್‌ಸಿಆರ್(Non-Cognizable Report) ದಾಖಲಿಸಿಕೊಂಡಿದ್ದಾರೆ.
vijayalakshmi, actor dhanveers
ವಿಜಯಲಕ್ಷ್ಮಿ , ಧನ್ವೀರ್ ಗೌಡ
Updated on: 

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಗೌಡ ನಡುವಿನ ವಿವಾದ ತಾರಕಕ್ಕೇರಿದೆ. ಧನ್ವೀರ್ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ದೂರು ದಾಖಲಿಸಿದ ಬೆನ್ನಲ್ಲೇ ಇದೀಗ ಧನ್ವೀರ್ ಅವರ ತಂದೆ ತಿಮ್ಮೇಗೌಡ ಕೂಡಾ ವಿಜಯಲಕ್ಷ್ಮಿ ಮತ್ತು ಅವರ ತಂಡದ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಮನೆಗೆ ನುಗ್ಗಿ ಗಲಾಟೆ ಮಾಡಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರು ಎನ್‌ಸಿಆರ್(Non-Cognizable Report) ದಾಖಲಿಸಿಕೊಂಡಿದ್ದಾರೆ.

ದೂರಿನಲ್ಲಿ ಏನಿದೆ? ಅಕ್ಟೋಬರ್ 21ರಂದು ರಾತ್ರಿ ಸುಮಾರು 8:30ರ ಸಮಯದಲ್ಲಿ ಧನ್ವೀರ್ ಮೈಸೂರಿಗೆ ತೆರಳಿದ್ದರು. ಆ ವೇಳೆ ಮನೆಯಲ್ಲಿ ನಾನು, ನನ್ನ ಪತ್ನಿ ಭಾರತಿ, ತಾಯಿ ಜಯಮ್ಮ ಹಾಗೂ ಮಗಳು ನಳಿನಾಕ್ಷಿ ಇದ್ದರು. ಆ ಸಂದರ್ಭದಲ್ಲಿ ಮನೆಗೆ ಬಂದ ವಿಜಯಲಕ್ಷ್ಮಿ ಹಾಗೂ ಅವರ ಮ್ಯಾನೇಜರ್ ನಾಗರಾಜ್, ಮನೆಯಲ್ಲಿದ್ದ ಸಂಬಂಧಿ ಅಜಯ್ ಗೌಡ ಅವರನ್ನು ಕಂಡು ರೌಡಿ ಎಂದು ತಪ್ಪಾಗಿ ಭಾವಿಸಿ, ನೀವು ರೌಡಿಗಳನ್ನು ಕರೆಸಿದ್ದೀರಾ, ನಾನು ಈಗ ನೋಡಿ ರೌಡಿಗಳನ್ನು ಹೇಗೆ ಕರೆಸುತ್ತೇನೆ ಎಂದು ರಂಪ ರಾದ್ದಾಂತ ಮಾಡಿದ್ದಾರೆ.

ಬಳಿಕ ವಿಜಯಲಕ್ಷ್ಮಿ ಅವರು ಗೌರವ್ ಶೆಟ್ಟಿ ಎಂಬುವವರಿಗೆ ಕರೆ ಮಾಡಿ “ಬೋಜಣ್ಣ ಮತ್ತು ಬಾಟಲಿ ಪ್ರಮೋದ್‌ನನ್ನು ಕಳಿಸು ಎಂದು ಹೇಳಿದ್ದಾರೆ.

ನಾಗರಾಜ್ ಸಹ ಫೋನ್ ಮಾಡಿ ಅವರನ್ನು ಬರಹೇಳಿದ್ದು, ಕೆಲವೇ ನಿಮಿಷಗಳಲ್ಲಿ ಬೋಜ ಹಾಗೂ ಬಾಟಲಿ ಪ್ರಮೋದ್ ಧನ್ವೀರ್ ಅವರ ಮನೆಗೆ ಬಂದಿದ್ದಾರೆ.

ಮನೆಗೆ ಬಂದ ವ್ಯಕ್ತಿಗಳನ್ನು “ನೀವು ಯಾರು, ನಮ್ಮ ಮನೆಗೆ ಹೇಗೆ ಬಂದ್ರಿ?” ಎಂದು ಕೇಳಿದ್ದಕ್ಕೆ, ಬಾಟಲಿ ಪ್ರಮೋದ್ ನಾನು ವಿಜಯಲಕ್ಷ್ಮಿ ತಮ್ಮ ಎಂದು ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲದೆ, “ಧನ್ವೀರ್‌ನನ್ನು ಎಲ್ಲಿಗೆ ಕರೆಸಿ ಏನು ಮಾಡಬೇಕೋ ನಮಗೆ ಗೊತ್ತಿದೆ ಎಂದು ಜೋರು ಧ್ವನಿಯಲ್ಲಿ ಬೆದರಿಕೆ ಹಾಕಿದ್ದಾರೆ.

ಈ ವೇಳೆ “ನಾನು ಪೊಲೀಸರಿಗೆ ಕರೆ ಮಾಡುತ್ತೇನೆ” ಎಂದು ನಾನು ಹೇಳಿದ ತಕ್ಷಣವೇ ಎಲ್ಲರೂ ಒಂದೇ ಕಾರಿನಲ್ಲಿ ಕೂಗಾಡಿಕೊಂಡು ಸ್ಥಳದಿಂದ ಹೊರಟು ಹೋಗಿದ್ದಾರೆ ಎಂದು ದೂರಿನಲ್ಲಿ ತಿಮ್ಮೇಗೌಡ ಉಲ್ಲೇಖಿಸಿದ್ದಾರೆ.

vijayalakshmi, actor dhanveers
ನಟ ಧನ್ವೀರ್ ವಿರುದ್ಧ ವಿಜಯಲಕ್ಷ್ಮಿ ಮ್ಯಾನೇಜರ್ ನಾಗರಾಜ್ ಪೊಲೀಸರಿಗೆ ದೂರು! ಕಾರಣವೇನು?

ತಮ್ಮ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಜೀವ ಬೆದರಿಕೆ ಹಾಕಿರುವ ವಿಜಯಲಕ್ಷ್ಮಿ, ಮ್ಯಾನೇಜರ್ ನಾಗರಾಜ್, ಬೋಜ ಹಾಗೂ ಬಾಟಲಿ ಪ್ರಮೋದ್ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಧನ್ವೀರ್ ತಂದೆ ಪೊಲೀಸರಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com