ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್: ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಆದೇಶ..!

ಈವರೆಗೆ ಕರ್ನಾಟಕ ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆಕ್ಷೇಪಿಸಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವಂತೆ ಮನವಿ ಸಲ್ಲಿಸಿತು.
Cauvery water
ಕಾವೇರಿ ಜಲ
Updated on: 

ನವದೆಹಲಿ: ತಮಿಳುನಾಡಿಗೆ ಪ್ರತಿದಿನ 3,000 ಕ್ಯುಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಮುಂದಿನ 15 ದಿನಗಳ ಅವಧಿಯಲ್ಲಿ ಒಟ್ಟು 3 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆಯೂ ಸಮಿತಿ ಸೂಚಿಸಿದೆ.

ಶುಕ್ರವಾರ ನಡೆದ ಸಭೆಯಲ್ಲಿ ಕರ್ನಾಟಕ ಮತ್ತು ತಮಿಳುನಾಡಿನ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಹಾಗೂ ಎರಡೂ ರಾಜ್ಯಗಳ ನೀರಿನ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯಲಾಯಿತು.

ಈವರೆಗೆ ಕರ್ನಾಟಕ ತನ್ನ ಪಾಲಿನ ನೀರನ್ನು ಸಂಪೂರ್ಣವಾಗಿ ಬಿಡುಗಡೆ ಮಾಡಿಲ್ಲ ಎಂದು ತಮಿಳುನಾಡು ಆಕ್ಷೇಪಿಸಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವಂತೆ ಮನವಿ ಸಲ್ಲಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕ, ಈಗಾಗಲೇ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗಿದೆ ಎಂದು ತಿಳಿಸಿತು.

Cauvery water
ಮುಂಗಾರು ಬಹುತೇಕ ಅಂತ್ಯ: ಕಳೆದ ವರ್ಷಕ್ಕೆ ಹೋಲಿಸಿದರೆ ಕಾವೇರಿ ಜಲಾಶಯಗಳಲ್ಲಿ ಅರ್ಧದಷ್ಟು ಮಾತ್ರ ನೀರು!

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಕುಸಿದಿದ್ದು, ಈ ಪರಿಸ್ಥಿತಿಯಲ್ಲಿ ಮತ್ತಷ್ಟು ನೀರು ಬಿಡುಗಡೆ ಮಾಡುವುದು ಕಷ್ಟಕರವಾಗಿದೆ ಎಂದು ತನ್ನ ವಾದವನ್ನು ಮಂಡಿಸಿತು.

ಎರಡೂ ರಾಜ್ಯಗಳ ವಾದಗಳನ್ನು ಆಲಿಸಿದ ಸಮಿತಿ, ತಮಿಳುನಾಡಿಗೆ ಪ್ರತಿದಿನ 3,000 ಕ್ಯುಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿದ್ದು, 15 ದಿನಗಳ ಅವಧಿಯಲ್ಲಿ ಒಟ್ಟು 3 ಟಿಎಂಸಿ ಅಡಿ ನೀರು ಹರಿಸುವಂತೆಯೂ ಸೂಚನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com