ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರಾ..? Pendrive ತೋರಿಸಿ ಸಿದ್ದುಗೆ ಬೆದರಿಸಿದ್ದು ಯಾರು..?: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ

ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧವಿರುವ ಮನೋಭಾವ ಕಾಂಗ್ರೆಸ್‌ನಲ್ಲಿ ಕಾಣಿಸುತ್ತಿದೆ. ರಾಜಕೀಯದಲ್ಲಿ ಮೌಲ್ಯಗಳು ಕುಸಿಯುತ್ತಿರುವುದು ಆತಂಕಕಾರಿ.
Prahlad Joshi
ಹುಬ್ಬಳ್ಳಿಯಲ್ಲಿ ಮಾತನಾಡಿದ ಪ್ರಹ್ಲಾದ್ ಜೋಶಿ
Updated on: 

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತಹ ಹಿರಿಯ ನಾಯಕನಿಗೆ ಪೆನ್‌ಡ್ರೈವ್ ತೋರಿಸಿ ಬೆದರಿಸಿರುವುದರ ಹಿಂದೆ ಯಾರಿದ್ದಾರೆ ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶುಕ್ರವಾರ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೊಂದಿಗೆ ವೈಚಾರಿಕ ಭಿನ್ನಾಭಿಪ್ರಾಯಗಳಿದ್ದರೂ, ಅವರಂತಹ ಹಿರಿಯ ನಾಯಕನನ್ನು ಪೆನ್‌ಡ್ರೈವ್ ಮೂಲಕ ಬೆದರಿಸುವ ರಾಜಕೀಯ ಬೆಳವಣಿಗೆ ಖಂಡನೀಯ ಎಂದು ಕಿಡಿಕಾರಿದರು.

ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧವಿರುವ ಮನೋಭಾವ ಕಾಂಗ್ರೆಸ್‌ನಲ್ಲಿ ಕಾಣಿಸುತ್ತಿದೆ. ರಾಜಕೀಯದಲ್ಲಿ ಮೌಲ್ಯಗಳು ಕುಸಿಯುತ್ತಿರುವುದು ಆತಂಕಕಾರಿ. ಸಿದ್ದರಾಮಯ್ಯ ಅವರ ವಿಚಾರದಲ್ಲಿ ಇಂತಹ ಬೆಳವಣಿಗೆಗೆ ಕಾರಣರಾದವರು ಯಾರು ಎಂಬುದನ್ನು ಕಾಂಗ್ರೆಸ್ ಹೈಕಮಾಂಡ್ ಬಹಿರಂಗಪಡಿಸಬೇಕು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ವಿರುದ್ಧ ನಡೆಯುತ್ತಿರುವ ಹೋರಾಟದ ಹಿಂದೆ ಅಂತರರಾಷ್ಟ್ರೀಯ ಸಂಘಟನೆಗಳ ಕೈವಾಡವಿದೆ ಎಂಬ ವಿಚಾರವೂ ಚರ್ಚೆಯಲ್ಲಿದೆ ಎಂದು ಹೇಳಿದರು.

Prahlad Joshi
ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಸಿದ್ಧ, ಪ್ರತಿಭಟನೆ ಕೈಬಿಡಿ: ರೈತರಿಗೆ ಪ್ರಹ್ಲಾದ್ ಜೋಶಿ ಮನವಿ

ಫ್ರಾನ್ಸ್ ಮತ್ತು ಯುರೋಪ್‌ನಲ್ಲಿಯೂ ಎಸ್‌ಐಆರ್‌ಗೆ ಸಂಬಂಧಿಸಿದ ಹೋರಾಟಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಸಂಘಟನೆಯ ಪಾತ್ರದ ಕುರಿತು ಅಮೆರಿಕದ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ ಎಂದು ತಿಳಿಸಿದರು.

ಇದೇ ವೇಳೆ ಅಧಿಕಾರದಲ್ಲಿ ಮುಂದುವರಿಯುವುದೊಂದೇ ಗುರಿಯಾಗಿಸಿಕೊಂಡು ದೇಶದ ಹಿತಾಸಕ್ತಿಯನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, ದೇಶದಲ್ಲಿ ಅಭದ್ರತೆಯ ವಾತಾವರಣ ನಿರ್ಮಾಣವಾಗುವಂತಹ ಬೆಳವಣಿಗೆಗಳು ನಡೆಯುತ್ತಿವೆ. ಅರಾಜಕತೆ ಸೃಷ್ಟಿಸಲು ಹುನ್ನಾರ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com