ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ; ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುತ್ತೇವೆ: ಸಿಎಂ ಡಿ.ಕೆ. ಶಿವಕುಮಾರ್; Video

ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026 ಟೂರ್ನಿಯ ಎಲ್ಲ ದೇಶಗಳ ತಂಡಗಳ ಆಟಗಾರರಿಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಭಾರತೀಯ ಬಾಸ್ಕೆಟ್‌ಬಾಲ್ ಫೆಡರೇಶನ್ ಹಾಗೂ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಔತಣಕೂಟದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.
ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ; ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುತ್ತೇವೆ: ಸಿಎಂ ಡಿ.ಕೆ. ಶಿವಕುಮಾರ್; Video
Updated on: 

ಫಿಬಾ (FIBA) ಬಾಸ್ಕೆಟ್‌ಬಾಲ್ ಪಂದ್ಯಾವಳಿಯ ಆತಿಥ್ಯಕ್ಕೆ ಬೆಂಗಳೂರನ್ನು ಆಯ್ಕೆ ಮಾಡಿರುವುದು ಅತ್ಯಂತ ಸಂತೋಷದ ವಿಷಯ. ಬೆಂಗಳೂರಿನ ಅತ್ಯುತ್ತಮ ಹವಾಮಾನದಿಂದಾಗಿ ಅನೇಕ ಅಂತಾರಾಷ್ಟ್ರೀಯ ಕ್ರೀಡಾಪಟುಗಳು, ವಿಶೇಷವಾಗಿ ಒಲಿಂಪಿಕ್ಸ್‌ಗೆ ಸಿದ್ಧತೆ ನಡೆಸುವ ಸಂದರ್ಭದಲ್ಲಿ, ತರಬೇತಿಗಾಗಿ ಬೆಂಗಳೂರನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಫಿಬಾ ಮಹಿಳಾ ಬಾಸ್ಕೆಟ್‌ಬಾಲ್ ಲೀಗ್ ಏಷ್ಯಾ–2026 ಟೂರ್ನಿಯ ಎಲ್ಲ ದೇಶಗಳ ತಂಡಗಳ ಆಟಗಾರರಿಗೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಇಂದು ಭಾರತೀಯ ಬಾಸ್ಕೆಟ್‌ಬಾಲ್ ಫೆಡರೇಶನ್ ಹಾಗೂ ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಔತಣಕೂಟದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಮಾತನಾಡಿದರು.

ಈ ರಾಜ್ಯದ ಮುಖ್ಯಮಂತ್ರಿಯಾಗಿ, ಸ್ಪರ್ಧಿಸಲು, ಕ್ರೀಡೆಯಲ್ಲಿ ಭಾಗವಹಿಸಲು ಹಾಗೂ ಸಕಾರಾತ್ಮಕ ಸಂದೇಶವನ್ನು ಸಾರಲು ಇಲ್ಲಿಗೆ ಆಗಮಿಸಿರುವ ನಿಮ್ಮೆಲ್ಲರನ್ನೂ ಸ್ವಾಗತಿಸುವುದು ನನಗೆ ದೊರೆತ ವಿಶೇಷ ಗೌರವವಾಗಿದೆ ಎಂದು ಹೇಳಿದರು.

ಈ ತಂಡಗಳನ್ನು ನೋಡಿದಾಗ ಅಸಾಧಾರಣ ಪ್ರತಿಭೆ ಹೊಂದಿರುವ ಯುವ ಕ್ರೀಡಾಪಟುಗಳು ನನ್ನ ಕಣ್ಣಿಗೆ ಕಾಣುತ್ತಾರೆ. ನೀವು ಪ್ರತಿನಿಧಿಸುತ್ತಿರುವ ಮಹಾನ್ ರಾಷ್ಟ್ರಗಳ ಭವಿಷ್ಯ ನೀವೇ ಆಗಿದ್ದೀರಿ. ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದರು.

ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ ಒದಗಿಸಲು ನಾವು ಕ್ರಮ ಕೈಗೊಂಡಿದ್ದೇವೆ. ಕರ್ನಾಟಕದ ಕ್ರೀಡಾಪಟುಗಳಿಗಾಗಿ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ಮೀಸಲಾತಿಯನ್ನೂ ಕಲ್ಪಿಸಿದ್ದೇವೆ. ಈ ಉಪಕ್ರಮವು ಮತ್ತಷ್ಟು ಕ್ರೀಡಾ ಪ್ರತಿಭೆಗಳು ಹೊರಹೊಮ್ಮಲು ಪ್ರೇರಣೆಯಾಗಲಿದೆ ಎಂಬ ವಿಶ್ವಾಸವಿದೆ.

ನಿನ್ನೆ ಸಾಯಂಕಾಲ ನಡೆದ ಔತಣಕೂಟದಲ್ಲಿ ಭಾಗವಹಿಸಿರುವ ಎಲ್ಲ ಕ್ರೀಡಾಪಟುಗಳು, ತಂಡಗಳ ಆಡಳಿತ ಮಂಡಳಿಯ ಸದಸ್ಯರು, ಕ್ರೀಡಾ ಒಕ್ಕೂಟಗಳ ಪ್ರತಿನಿಧಿಗಳು ಹಾಗೂ ಗಣ್ಯ ಅತಿಥಿಗಳಿಗೆ ಸಿಎಂ ಶುಭಹಾರೈಸಿದರು.

ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಬದ್ಧ; ಗ್ರಾಮೀಣ ಪ್ರತಿಭೆಗಳನ್ನು ಗುರುತಿಸುತ್ತೇವೆ: ಸಿಎಂ ಡಿ.ಕೆ. ಶಿವಕುಮಾರ್; Video
ಸೌದಿ ಅರೇಬಿಯಾದಲ್ಲಿ ಸಿಲುಕಿರುವ ಕರ್ನಾಟಕದ 600 ಯಾತ್ರಿಕರ ರಕ್ಷಣೆ: ಕೇಂದ್ರಕ್ಕೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ನಮ್ಮ ಸರ್ಕಾರ ಈ ವರ್ಷದಿಂದ ಗ್ರಾಮೀಣ ಭಾಗದಲ್ಲಿನ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಮುಂದಾಗಿದೆ. ಯಾವ ಭಾಗದಿಂದ ಯಾವ ಪ್ರತಿಭೆ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಲಿದ್ದಾರೆ ಎನ್ನುವುದು ನಮಗೆ ಗೊತ್ತಿರುವುದಿಲ್ಲ. ಏಷ್ಯನ್ ಗೇಮ್ಸ್‌ನಲ್ಲಿ ನಮ್ಮ ಕ್ರೀಡಾಪಟುಗಳ ಸಾಧನೆ ಗಮನಾರ್ಹ. ಮುಂಬರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಏಷ್ಯಾದ ಕ್ರೀಡಾಪಟುಗಳು ಹೆಚ್ಚು ಸಾಧನೆ ಮಾಡುವ ವಿಶ್ವಾಸವಿದೆ ಎಂದರು.

ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ನಮ್ಮ ಸರ್ಕಾರ ಬದ್ಧವಾಗಿದ್ದು, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ಪ್ರತ್ಯೇಕ ಮೀಸಲಾತಿ ನೀಡಲಾಗಿದೆ. ಇದರಿಂದ ಹೆಚ್ಚು ಕ್ರೀಡಾಪಟುಗಳು ಹೊರಹೊಮ್ಮುತ್ತಾರೆ ಎಂದರು.

ಈ ವೇಳೆ ಉಪ ಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ, ಸಚಿವರಾದ ಎಂ.ಬಿ.ಪಾಟೀಲ್, ಟಿ.ರಘುಮೂರ್ತಿ, ಫಿಬಾ ಏಷ್ಯಾ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಗೋವಿಂದರಾಜ್, ಹಿರಿಯ ಅಧಿಕಾರಿಗಳು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com