ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಲಘು ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲು..!

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2.9 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.
Representative Image
ಸಾಂದರ್ಭಿಕ ಚಿತ್ರ
Updated on: 

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕು ಸೇರಿದಂತೆ ಸುತ್ತಮುತ್ತಲಿನ ಹಲವು ಭಾಗಗಳಲ್ಲಿ ಶನಿವಾರ ಮುಂಜಾನೆ ಲಘು ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.9 ರಷ್ಟು ತೀವ್ರತೆ ದಾಖಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2.9 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಭೂಕಂಪದ ಕೇಂದ್ರಬಿಂದು ಗೌರಿಬಿದನೂರು ತಾಲ್ಲೂಕಿನ ಸೋಮಸೇಟ್ಟಿಹಳ್ಳಿ ಗ್ರಾಮದ ಸಮೀಪ ಪತ್ತೆಯಾಗಿದೆ.

ಶನಿವಾರ ಮುಂಜಾನೆ 3.29ಕ್ಕೆ ಸಂಭವಿಸಿದ ಭೂಕಂಪವು ಭೂಮಿಯ ಮೇಲ್ಮೈಯಿಂದ ಸುಮಾರು 5 ಕಿ.ಮೀ. ಆಳದಲ್ಲಿ ದಾಖಲಾಗಿದೆ ಎಂದು ಕೇಂದ್ರ ತಿಳಿಸಿದೆ.

ಕೆಎಸ್‌ಎನ್‌ಡಿಎಂಸಿ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಗೌರಿಬಿದನೂರು ತಾಲ್ಲೂಕಿನ ತರಿದಾಳು ಗ್ರಾಮ ಪಂಚಾಯಿತಿಯಿಂದ ನೈಋತ್ಯಕ್ಕೆ 2.53 ಕಿ.ಮೀ., ಆಲಿಪುರ ಗ್ರಾಮ ಪಂಚಾಯಿತಿಯಿಂದ ವಾಯವ್ಯಕ್ಕೆ 4.30 ಕಿ.ಮೀ. ಹಾಗೂ ಚಿಕ್ಕಬಳ್ಳಾಪುರ ನಗರದಿಂದ ವಾಯವ್ಯಕ್ಕೆ 33 ಕಿ.ಮೀ. ದೂರದಲ್ಲಿದೆ.

Representative Image
ದೊಡ್ಡಬಳ್ಳಾಪುರದಲ್ಲಿ ದಿಢೀರ್ ಭೂಕಂಪನ: ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲು; ಆತಂಕ ಬೇಡ ಎಂದ ತಜ್ಞರು

ಭೂಕಂಪದ ಕೇಂದ್ರಬಿಂದುವಿನಿಂದ ಸಿದ್ಧಪಡಿಸಿದ ಭೂಕಂಪನ ತೀವ್ರತೆಯ ನಕ್ಷೆಯ ಪ್ರಕಾರ, ಕಂಪನದ ತೀವ್ರತೆ ಕಡಿಮೆಯಾಗಿದೆ. ಕೇಂದ್ರಬಿಂದುವಿನಿಂದ 20ರಿಂದ 30 ಕಿ.ಮೀ. ವ್ಯಾಪ್ತಿಯವರೆಗೆ ಕಂಪನದ ಅನುಭವವಾಗಿರುವ ಸಾಧ್ಯತೆಯಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

ಭೂಕಂಪದ ತೀವ್ರತೆ ಕಡಿಮೆ ಇರುವುದರಿಂದ ಸ್ಥಳೀಯ ಜನರಿಗೆ ಯಾವುದೇ ಹಾನಿಯಾಗುವ ಸಾಧ್ಯತೆ ಇಲ್ಲ. ಆದಾಗ್ಯೂ, ಕೆಲವು ಪ್ರದೇಶಗಳಲ್ಲಿ ಕಂಪನದ ಅನುಭವವಾಗಿರಬಹುದು ಎಂದು ಸಂಸ್ಥೆ ಹೇಳಿದೆ.

ಭೂಕಂಪದ ಕೇಂದ್ರಬಿಂದು ಭೂಕಂಪ ವಲಯ-2ರಲ್ಲಿ ಬರುತ್ತಿದ್ದು, ಈ ಪ್ರದೇಶದಲ್ಲಿ ಭೂಮಿಯ ರಚನೆಯಲ್ಲಿ ಯಾವುದೇ ಪ್ರಮುಖ ಅಸಮತೋಲನಗಳಿಲ್ಲ ಎಂದು ಕೇಂದ್ರ ತಿಳಿಸಿದೆ. ಭೂಕಂಪದ ತೀವ್ರತೆ ಕಡಿಮೆಯಾಗಿರುವುದರಿಂದ ಜನರು ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com