ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ, ಮೂವರಿಗೆ ಗಂಭೀರ ಗಾಯ

ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಬ್ಲು, ಪಾನಿಪುರಿ ವ್ಯಾಪಾರಕ್ಕಾಗಿ ಇಲ್ಲಿ ಪ್ರತ್ಯೇಕ ಗೋದಾಮೊಂದನ್ನು ಬಾಡಿಗೆಗೆ ಪಡೆದಿದ್ದರು. ರಾತ್ರಿ ವೇಳೆ ಗೋದಾಮಿನಲ್ಲಿದ್ದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿದ್ದು, ಒಳಗೆ ಅನಿಲ ಸಂಗ್ರಹವಾಗಿ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ.
File photo
ಸಂಗ್ರಹ ಚಿತ್ರ
Updated on: 

ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ಇಂದು ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ಬಿಹಾರ ಮೂಲದ ಬಬ್ಲು, ಪಕ್ಕದ ಮನೆಯ ನಿವಾಸಿ ಲಕ್ಷ್ಮಮ್ಮ ಹಾಗೂ ಒಂಬತ್ತು ವರ್ಷದ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಬ್ಲು, ಪಾನಿಪುರಿ ವ್ಯಾಪಾರಕ್ಕಾಗಿ ಇಲ್ಲಿ ಪ್ರತ್ಯೇಕ ಗೋದಾಮೊಂದನ್ನು ಬಾಡಿಗೆಗೆ ಪಡೆದಿದ್ದರು. ರಾತ್ರಿ ವೇಳೆ ಗೋದಾಮಿನಲ್ಲಿದ್ದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿದ್ದು, ಒಳಗೆ ಅನಿಲ ಸಂಗ್ರಹವಾಗಿ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ. ಬೆಳಗ್ಗೆ ಬಬ್ಲು ಗೋದಾಮಿಗೆ ಬಂದು ಬಾಗಿಲು ತೆರೆದಾಗ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ಬಳಿಕ ಬೆಂಕಿಯನ್ನು ನಂದಿಸಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

File photo
ಹುಬ್ಬಳ್ಳಿಯಲ್ಲಿ ಮತ್ತೆ ಮಾಂಜಾದಾರ ಹಾವಳಿ: ಯುವಕನ ಮುಖಕ್ಕೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು! Video

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com