

ಮೈಸೂರು: ನೀರಿನ ಪಂಪ್ ಸ್ವಚ್ಛಗೊಳಿಸುತ್ತಿದ್ದಾಗ ವಿದ್ಯುತ್ ಶಾಕ್‌ಗೆ ಒಳಗಾಗಿ 27 ವರ್ಷದ ಯುವಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಪಟ್ಟಣದಲ್ಲಿ ನಡೆದಿದೆ.
ಮೃತ ಯುವಕನನ್ನು ರಾಜಸ್ಥಾನ ಮೂಲದ ಪ್ರಕಾಶ್ ಎಂದು ಗುರುತಿಸಲಾಗಿದ್ದು, ಆತ ಬೈಲಕುಪ್ಪೆಯಲ್ಲಿ ಹಾರ್ಡ್‌ವೇರ್ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ನೀರಿನ ಪಂಪ್ ಸ್ವಚ್ಛಗೊಳಿಸುತ್ತಿದ್ದಾಗ ಅರ್ಥಿಂಗ್ ದೋಷದಿಂದ ಪ್ರಕಾಶ್‌ಗೆ ವಿದ್ಯುತ್ ಪ್ರವಹಿಸಿದೆ. ಇದರಿಂದ ಅವರು ನೀರಿನಲ್ಲಿ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಬೈಲಕುಪ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ವಿಡಿಯೋ ವೈರಲ್
ಇನ್ನು ನೀರಿನ ಕ್ಲೀನ್ ಮಾಡುವ ವೇಳೆ ವ್ಯಕ್ತಿಗೆ ವಿದ್ಯುತ್ ಶಾಕ್ ಆದ ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.