ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
Ex CM Siddaramaiah
ಸಿದ್ದರಾಮಯ್ಯ
Updated on: 

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಂಧನವಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿ ವಿಡಿಯೋ ರೆಕಾರ್ಡ್ ಮಾಡಲು ಮೊಬೈಲ್ ಖರೀದಿ ಮಾಡಿದ್ದ ಎನ್ನಲಾಗಿದ್ದು, ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ.

Ex CM Siddaramaiah
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಬೆಂಗಳೂರು ಸಿಸಿಬಿ ಪೊಲೀಸರಿಗೆ ಕಾಂಗ್ರೆಸ್ ಮಹಿಳಾ ನಾಯಕಿ ಶರಣು!

ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ರಹಸ್ಯ ಸ್ಥಳದಲ್ಲಿ ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಇದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸಿಸಿಬಿ ಪೊಲೀಸರು ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ ಬೆನ್ನಲ್ಲೇ, ಈ ಮಹಿಳಾ ನಾಯಕಿ ಪೊಲೀಸರಿಗೆ ಶರಣಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈ ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಮತ್ತು ಕನ್ನಡ ಸುದ್ದಿ ವಾಹಿನಿಯೊಂದರೊಂದಿಗೆ ಗುರುತಿಸಿಕೊಂಡಿರುವ ರಾಕೇಶ್ ಶೆಟ್ಟಿ ಇದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com