ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಬೆಂಗಳೂರು ಸಿಸಿಬಿ ಪೊಲೀಸರಿಗೆ ಕಾಂಗ್ರೆಸ್ ಮಹಿಳಾ ನಾಯಕಿ ಶರಣು!

ಉನ್ನತ ಮೂಲಗಳ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪೊಲೀಸರು ಕಾಂಗ್ರೆಸ್ ನಾಯಕಿಯನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.
Kripa alwa
ಕೃಪಾ ಆಳ್ವಾ
Updated on: 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ, ಕರಾವಳಿ ಕರ್ನಾಟಕದ ಕಾಂಗ್ರೆಸ್ ಮಹಿಳಾ ನಾಯಕಿಯೊಬ್ಬರು ಬೆಂಗಳೂರಿನ ಸೆಂಟ್ರಲ್ ಕ್ರೈಮ್ ಬ್ರಾಂಚ್ (CCB) ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಪೊಲೀಸರು ಇನ್ನೂ ಬಂಧನ ಪ್ರಕ್ರಿಯೆಯನ್ನು ಅಧಿಕೃತಗೊಳಿಸಿಲ್ಲ.

ಉನ್ನತ ಮೂಲಗಳ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಪೊಲೀಸರು ಕಾಂಗ್ರೆಸ್ ನಾಯಕಿಯನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ ಬೆನ್ನಲ್ಲೇ, ಈ ಮಹಿಳಾ ನಾಯಕಿ ಶರಣಾಗಿದ್ದಾರೆ.

ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಈ ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಮತ್ತು ಕನ್ನಡ ಸುದ್ದಿ ವಾಹಿನಿಯೊಂದರೊಂದಿಗೆ ಗುರುತಿಸಿಕೊಂಡಿರುವ ರಾಕೇಶ್ ಶೆಟ್ಟಿ ಇದ್ದಾರೆ ಎಂದು ಆರೋಪಿಸಿದರು.

ಇದಕ್ಕೂ ಮುನ್ನ, ಕೇಂದ್ರ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ಈ ಸ್ಟಿಂಗ್ ಆಪರೇಷನ್‌ಗೆ ಇವರೇ ಕಾರಣ ಎಂದು ದೂರಿದ್ದರು. ಈ ಸ್ಟಿಂಗ್ ಆಪರೇಷನ್ ವಿವಾದಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಅಕ್ಟೋಬರ್ 6 ರಂದು ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಿದ್ದರು ಎಂಬುದು ಗಮನಾರ್ಹ.

Kripa alwa
ಕಾಂಗ್ರೆಸ್​​ನಲ್ಲಿ 'ಸ್ಟಿಂಗ್'​​ ಕಂಪನ: ಯತೀಂದ್ರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾಗೆ ನೋಟಿಸ್!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com