

ಗದಗ: ಸೆಪ್ಟೆಂಬರ್ 13ರಿಂದ ನಾಪತ್ತೆಯಾಗಿದ್ದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (KRIDL) ಸಹಾಯಕ ಎಂಜಿನಿಯರ್ ಪರ್ವೇಜ್ ಅವರನ್ನು ಗದಗ ಪೊಲೀಸರು ಪತ್ತೆಹಚ್ಚಿ ವಾಪಸ್ ಕರೆತಂದಿದ್ದಾರೆ. ನಿನ್ನೆ ಶನಿವಾರ ಬೆಳಗ್ಗೆ ಪರ್ವೇಜ್ ಮನೆಗೆ ಮರಳಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.
ಮುಂಬೈನ ಬಾಂದ್ರಾದಲ್ಲಿ ಪರ್ವೇಜ್ ಅವರನ್ನು ಪತ್ತೆಹಚ್ಚಲಾಗಿದೆ. ಶುಕ್ರವಾರ ತಡರಾತ್ರಿ ಪರ್ವೇಜ್ ಅವರನ್ನು ಮುಂಬೈನಿಂದ ಗದಗಕ್ಕೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಆರೋಗ್ಯವಾಗಿದ್ದು, ವಿಚಾರಣೆ ನಡೆಸಿದ ಬಳಿಕ ಮನೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ಪರ್ವೇಜ್ ರನ್ನು ನಗರದ ಪ್ರವಾಸಿ ಮಂದಿರದಲ್ಲಿ ಇರಿಸಲಾಗಿತ್ತು. ನಿನ್ನೆ ಬೆಳಗ್ಗೆ ಅವರು ಹಾವೇರಿಗೆ ತೆರಳಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ತಿಳಿಸಿದ್ದಾರೆ.