ಕೈ ಪಾಳಯದಲ್ಲಿ 'ಸ್ಟಿಂಗ್ ಆಪರೇಷನ್' ಕೋಲಾಹಲ: ನ.2ಕ್ಕೆ ದೆಹಲಿಗೆ ಮಾಜಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ದೂರು ಸಲ್ಲಿಕೆ..?

ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ನಕಲಿ ವಿಡಿಯೊ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
Siddaramaiah meets Rahul Gandhi at Delhi
ದೆಹಲಿಯಲ್ಲಿ ರಾಹುಲ್ ಭೇಟಿಯಾದ ಸಿದ್ದರಾಮಯ್ಯ.
Updated on: 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರು ತಮ್ಮ ವಿರುದ್ಧ ನಡೆದಿದೆಯೆನ್ನಲಾದ ಸ್ಟಿಂಗ್ ಆಪರೇಷನ್ ಕುರಿತು ಚರ್ಚಿಸಲು ನವೆಂಬರ್ 2ರಂದು ನವದೆಹಲಿಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನವೆಂಬರ್ 1ರಂದು ಎಐಸಿಸಿ ಆಯೋಜಿಸಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆಂದು ತಿಳಿದುಬಂದಿದೆ.

ಇದೇ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೋರಿ ಮನವಿ ಮಾಡಿದ್ದು, ನವೆಂಬರ್ 2ರಂದು ಭೇಟಿಯಾಗಲು ರಾಹುಲ್ ಸಮಯ ನೀಡಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆಯೆನ್ನಲಾದ ಸ್ಟಿಂಗ್ ಕಾರ್ಯಾಚರಣೆಯು ಕರ್ನಾಟಕದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ತಮ್ಮ ವರ್ಚಸ್ಸಿಗೆ ಧಕ್ಕೆ ತರುವ ಹಾಗೂ ನಕಲಿ ವಿಡಿಯೊ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಉದ್ದೇಶದಿಂದ ಈ ಷಡ್ಯಂತ್ರ ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ತನಿಖೆ ನಡೆಸುವಂತೆ ಈಗಾಗಲೇ ದೂರು ದಾಖಲಿಸಿದ್ದಾರೆ.

ಇದೇ ವೇಳೆ, ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ವಿಡಿಯೊ ಪ್ರಸಾರ ಹಾಗೂ ಇದರ ಹಿಂದೆ ಕಾರ್ಯನಿರ್ವಹಿಸಿರುವುದಾಗಿ ಆರೋಪಿಸಲಾಗಿರುವ ಜಾಲದ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Siddaramaiah meets Rahul Gandhi at Delhi
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್: ದೆಹಲಿ ಮೂಲದ ಆರೋಪಿಗೆ ಷರತ್ತುಬದ್ಧ ಜಾಮೀನು..!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com