ಕುಂದಾಪುರ: ಬಟ್ಟೆ ತೊಳೆಯಲು ಹೋಗಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕಿಯರ ದಾರುಣ ಸಾವು..!

ಭಾನುವಾರ ಸಂಜೆ ಸುಮಾರು 4 ಗಂಟೆಗೆ ಕುಂದಾಪುರ ಸಮೀಪದ ಹೊಸಾಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುಡಿಸಲಿನಲ್ಲಿ ವಾಸವಾಗಿದ್ದ ಐವರು ಮಕ್ಕಳು ಬಟ್ಟೆ ತೊಳೆಯಲು ಕೊಪ್ಪರಿಗೆಯ ಗುಡ್ಡೆಯಲ್ಲಿರುವ ಕಡುಬಿನ್ ಕೆರೆಗೆ ತೆರಳಿದ್ದರು.
File photo
ಸಂಗ್ರಹ ಚಿತ್ರ
Updated on: 

ಉಡುಪಿ: ಕೆರೆಯಲ್ಲಿ ಬಟ್ಟೆ ತೊಳೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಇಬ್ಬರು ಬಾಲಕಿಯರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಮೃತ ಬಾಲಕಿಯರನ್ನು ಸುನೀತಾ (13) ಮತ್ತು ವೈಶಾಲಿ (13) ಎಂದು ಗುರುತಿಸಲಾಗಿದೆ. ಇಬ್ಬರೂ ಹೊಸಾಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದರು. ಮುಲ್ಲಿಕಟ್ಟೆಯ ಗುಡಿಸಲಿನಲ್ಲಿ ತಮ್ಮ ಕುಟುಂಬಗಳೊಂದಿಗೆ ವಾಸವಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಸಂಜೆ ಸುಮಾರು 4 ಗಂಟೆಗೆ ಕುಂದಾಪುರ ಸಮೀಪದ ಹೊಸಾಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುಡಿಸಲಿನಲ್ಲಿ ವಾಸವಾಗಿದ್ದ ಐವರು ಮಕ್ಕಳು ಬಟ್ಟೆ ತೊಳೆಯಲು ಕೊಪ್ಪರಿಗೆಯ ಗುಡ್ಡೆಯಲ್ಲಿರುವ ಕಡುಬಿನ್ ಕೆರೆಗೆ ತೆರಳಿದ್ದರು.

ಕೆರೆಯ ದಡದಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಸುನೀತಾ ಮತ್ತು ವೈಶಾಲಿ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

File photo
ಉಡುಪಿ: ರಸ್ತೆ ಅಪಘಾತದಲ್ಲಿ ಆರ್‌ಎಸ್‌ಎಸ್ ಮುಖಂಡ ಸಾವು!

ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ, ಗಂಗೊಳ್ಳಿಯ ಮುಳುಗು ತಜ್ಞ ದಿನೇಶ್ ಖಾರ್ವಿ ನೇತೃತ್ವದ ಮುಳುಗು ತಜ್ಞರ ತಂಡ, ಕುಂದಾಪುರದ ತುರ್ತು ಸ್ಪಂದನಾ ಘಟಕ, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯಾಚರಣೆ ನಡೆಸಿದರು. ಬಳಿಕ ಇಬ್ಬರು ಬಾಲಕಿಯರ ಮೃತದೇಹಗಳನ್ನು ಹೊರತೆಗೆದರು.

ಗಂಗೊಳ್ಳಿ ಪೊಲೀಸ್ ಠಾಣೆಯ ಪಿಎಸ್‌ಐ ಪವನ್ ನಾಯಕ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com