ಸಿದ್ದು ವಿರುದ್ಧ 'sting operation' ಪ್ರಕರಣ: ತನಿಖೆಗೆ ತೆರಳಿದ್ದ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಆರೋಪ, JDS ಕಾರ್ಯಕರ್ತನ ಪತ್ನಿ, ಸ್ನೇಹಿತೆ ವಿರುದ್ಧ ಕೇಸ್ ದಾಖಲು..!

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಚ್ ವಾರಂಟ್ ಜಾರಿಗೊಳಿಸಲು ಕವಿತಾ ಅವರು ತನಿಖಾಧಿಕಾರಿ ಹಾಗೂ ಇತರ ಸಿಬ್ಬಂದಿಯೊಂದಿಗೆ ಅಕ್ಟೋಬರ್ 23ರಂದು ಭಾರತ್ ನಗರದ ಲಕ್ಷ್ ರಾಯಲ್ ಮ್ಯಾನರ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ಗೆ ತೆರಳಿದ್ದರು.
College student dies by suicide
ಎಫ್ಐಆರ್ (ಸಾಂಕೇತಿಕ ಚಿತ್ರ)
Updated on: 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ತೆರಳಿದ್ದ ಸಿಸಿಬಿ ಮಹಿಳಾ ಇನ್ಸ್‌ಪೆಕ್ಟರ್ ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯ ಮೋಹನ್ ಗೌಡ ಅವರ ಪತ್ನಿ ಪವಿತ್ರಾ ಮತ್ತು ಅವರ ಸ್ನೇಹಿತೆಯ ವಿರುದ್ಧ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಎನ್ನಲಾದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣದ ತನಿಖೆಯ ಭಾಗವಾಗಿ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯರೊಬ್ಬರ ನಿವಾಸದಲ್ಲಿ ಶೋಧ ನಡೆಸುವ ವೇಳೆ ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್‌ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪ ಕೇಳಿ ಬಂದಿದೆ.

ಈ ಸಂಬಂಧ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಹಿಳಾ ರಕ್ಷಣಾ ವಿಭಾಗದ ಇನ್‌ಸ್ಪೆಕ್ಟರ್ ಕವಿತಾ ಜಿ.ಎಂ. ಅವರು ಅಕ್ಟೋಬರ್ 24ರಂದು ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗದ ಸದಸ್ಯ ಮೋಹನ್ ಗೌಡ ಅವರ ಪತ್ನಿ ಪವಿತ್ರಾ ಮತ್ತು ಅವರ ಸ್ನೇಹಿತೆ ಪವಿತ್ರಾ ಎಂಬುವವರ ವಿರುದ್ಧ ದೂರು ನೀಡಲಾಗಿದೆ.

ಪೊಲೀಸರ ಪ್ರಕಾರ, ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧನಾ ವಾರಂಟ್ ಜಾರಿಗೊಳಿಸಲು ಕವಿತಾ ಅವರು ತನಿಖಾಧಿಕಾರಿ ಹಾಗೂ ಇತರ ಸಿಬ್ಬಂದಿಯೊಂದಿಗೆ ಅಕ್ಟೋಬರ್ 23ರಂದು ಭಾರತ್ ನಗರದ ಲಕ್ಷ್ ರಾಯಲ್ ಮ್ಯಾನರ್ ಅಪಾರ್ಟ್‌ಮೆಂಟ್‌ನಲ್ಲಿರುವ ಫ್ಲ್ಯಾಟ್‌ಗೆ ತೆರಳಿದ್ದರು.

College student dies by suicide
ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣ: ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ವಿಚಾರಣೆ!

ಮೋಹನ್ ಗೌಡ ಅವರಿಗೆ ಶೋಧನಾ ವಾರಂಟ್‌ ಜಾರಿಗೊಳಿಸಿದ ಅಧಿಕಾರಿಗಳು ಸಂಜೆ 5ರಿಂದ 6 ಗಂಟೆಯವರೆಗೆ ಮನೆಯಲ್ಲಿ ಶೋಧ ನಡೆಸಿದ್ದರು.

ಈ ವೇಳೆ ಪರಿಶೀಲನೆಗಾಗಿ ತಮ್ಮ ಮೊಬೈಲ್ ಫೋನ್‌ ನೀಡಲು ಮೋಹನ್ ಗೌಡ ಅವರ ಪತ್ನಿ ಪವಿತ್ರಾ ನಿರಾಕರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕವಿತಾ ಅವರು ಮೊಬೈಲ್ ಫೋನ್ ಪಡೆಯಲು ಮುಂದಾದಾಗ ಪವಿತ್ರಾ ಮತ್ತು ಅವರ ಸ್ನೇಹಿತೆ ಇನ್‌ಸ್ಪೆಕ್ಟರ್ ಅವರನ್ನು ಪ್ರಶ್ನಿಸಿ, ಕೈಗಳನ್ನು ಹಿಡಿದು ಬಲವಂತವಾಗಿ ಎಳೆದಾಡಿದ್ದಾರೆ. ಇದರಿಂದ ಅವರ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘರ್ಷಣೆಯ ವೇಳೆ ಇನ್‌ಸ್ಪೆಕ್ಟರ್ ಧರಿಸಿದ್ದ 9 ಗ್ರಾಂ ತೂಕದ ಚಿನ್ನದ ಬಳೆಯೂ ಕಾಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com