

ಬೆಂಗಳೂರು: ವಿಧಾನ ಪರಿಷತ್ತಿನ 2 ಪದವೀಧರ, 2 ಶಿಕ್ಷಕರ ಕ್ಷೇತ್ರ ಸೇರಿ ಒಟ್ಟು 4 ಕ್ಷೇತ್ರಗಳ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟ NDA ನಾಲ್ಕು ಸ್ಥಾನಗಳ್ಲಲೂ ಗೆಲುವು ಸಾಧಿಸಿದ್ದು ಕಾಂಗ್ರೆಸ್ ಶೂನ್ಯ ಸುತ್ತಿದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರ:
ಬಿಜೆಪಿ ಜೆಡಿಎಸ್ ಮೈತ್ರಿ (NDA) ಅಭ್ಯರ್ಥಿ ಎ.ಪಿ ರಂಗನಾಥ್ 908 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಐದು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲು ಕಂಡಿದ್ದಾರೆ. ಇನ್ನು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ. ನಮೋಶಿ ಗೆಲುವು ಸಾಧಿಸಿದ್ದಾರೆ. ಮೊದಲ ಸುತ್ತಿನಲ್ಲಿ 7239, ಎರಡನೇ ಸುತ್ತಿನಲ್ಲಿ 7311 ಸೇರಿ 14,540 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮತ್ತೂರ್ ಸೋಲು ಕಂಡಿದ್ದಾರೆ.
ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ: NDA ಅಭ್ಯರ್ಥಿಗಳು ಮುನ್ನಡೆ
ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ-2026ರ ಮತ ಎಣಿಕೆ ಕಾರ್ಯವು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆಯುತ್ತಿದೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಒಟ್ಟು 14,001 ಮತಗಳಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಸಂಕನೂರ 6459 ಮತಗಳು ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರು 4394 ಮತಗಳನ್ನು ಪಡೆದುಕೊಂಡಿರುತ್ತಾರೆ. ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಸಂಕನೂರ ಎಸ್.ವಿ ಅವರು 2206 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು ಆಗ್ನೇಯ ಪದವೀಧರರ ಕ್ಷೇತ್ರದಲ್ಲೂ ಬಿಜೆಪಿಯ ಅಭ್ಯರ್ಥಿ ಕೆ.ಎಂ. ಸುರೇಶ್ ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ ಹಿನ್ನಡೆಯಲ್ಲಿದ್ದಾರೆ.
ಪಶ್ಚಿಮ ಪದವೀಧರರ ಕ್ಷೇತ್ರದ ಎಣಿಕೆ ಧಾರವಾಡದಲ್ಲಿ, ಈಶಾನ್ಯ ಶಿಕ್ಷಕರ ಕ್ಷೇತ್ರದ ಎಣಿಕೆ ಕಲಬುರಗಿಯಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದ ಮತ ಎಣಿಕೆ ಬೆಂಗಳೂರಲ್ಲಿ ನಡೆಯಿತು.