ಗೋಕರ್ಣದ ತದಡಿ ಬಂದರಿನಲ್ಲಿ ಭೀಕರ ದುರಂತ; ಬೋಟ್‌ನಲ್ಲಿ ಉಸಿರುಗಟ್ಟಿ ಮೂವರು ಮೀನುಗಾರರು ಸಾವು!

ಮೃತ ಮೀನುಗಾರರನ್ನು ನೌಶಾದ್ (48), ಅಮೀನ್ (40) ಮತ್ತು ಅಮನ್ (26) ಎಂದು ಗುರುತಿಸಲಾಗಿದೆ.
Three fishermen die of suffocation while cleaning boat’s tank in Tadadi port
ಬೋಟ್‌ನಲ್ಲಿ ಉಸಿರುಗಟ್ಟಿ ಮೂವರು ಮೀನುಗಾರರು ಸಾವು
Updated on: 

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ತದಡಿ ಬಂದರಿನಲ್ಲಿ ಮಂಗಳವಾರ ಬೋಟ್ ನ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಮೂವರು ಮೀನುಗಾರರು ವಿಷಕಾರಿ ವಾಸನೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಮೃತ ಮೀನುಗಾರರನ್ನು ನೌಶಾದ್ (48), ಅಮೀನ್ (40) ಮತ್ತು ಅಮನ್ (26) ಎಂದು ಗುರುತಿಸಲಾಗಿದೆ.

ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯ ತದಡಿ ಬಂದರಿನಲ್ಲಿ ಈ ಭೀಕರ ದುರಂತ ಸಂಭವಿಸಿದ್ದು, ಅಸ್ವಸ್ಥಗೊಂಡ ಅಬ್ದುಲ್ ಯಾಕುಬ್ ದಾಡಿಯಾ (60) ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Three fishermen die of suffocation while cleaning boat’s tank in Tadadi port
ಬೆಂಗಳೂರು: ಅಪಾರ್ಟ್ಮೆಂಟ್ ಮೇಲಿಂದ ಜಿಗಿದು DRDO ವಿಜ್ಞಾನಿ ಆತ್ಮಹತ್ಯೆ; ಕೆಲಸದ ಒತ್ತಡವೇ ಸಾವಿಗೆ ಕಾರಣ ಎಂದ ಕುಟುಂಬ!

ಗೋಕರ್ಣದ ತದಡಿಯ 'ಕುಚೈಮಾ' ಬೋಟ್‌ನಲ್ಲಿ ಈ ಮೀನುಗಾರರು ಕೆಲಸ ಮಾಡುತ್ತಿದ್ದರು. ಚಮನ್ ಮೀನುಗಳನ್ನು ಹಿಡಿದು ಬಂದರಿಗೆ ವಾಪಸಾಗಿದ್ದರು. ಬಳಿಕ ಮೀನು ಸಂಗ್ರಹಿಸುವ ಸ್ಥಳಕ್ಕೆ ಇಳಿದು ಮೀನನ್ನು ಖಾಲಿ ಮಾಡಿದ್ದರು. ನಂತರ ಮೀನು ಸಂಗ್ರಹಿಸಿದ್ದ ಜಾಗವನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೀನಿನ ಕೊಳೆತ ವಾಸನೆ ಅಥವಾ ವಿಷಕಾರಿ ವಾಸನೆಯಿಂದ ಉಸಿರುಗಟ್ಟಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

​ಇಬ್ಬರ ರಕ್ಷಣೆ, ಓರ್ವನ ಸ್ಥಿತಿ ಗಂಭೀರ

​ಈ ದುರ್ಘಟನೆಯಲ್ಲಿ ಒಟ್ಟು ಐವರು ಸಿಲುಕಿದ್ದು, ಇಬ್ಬರು ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಆದರೆ ರಕ್ಷಿಸಲ್ಪಟ್ಟವರ ಪೈಕಿ ಓರ್ವನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

​ಘಟನೆಗೆ ಸಂಬಂಧಿಸಿದಂತೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com