

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ್ ಗೌಡ ನಡುವಿನ ಶೀತಲ ಸಮರ ನಡೆಯುತ್ತಿದೆ. ಈ ಮಧ್ಯೆ ವಿಜಯಲಕ್ಷ್ಮೀ ನಟ ಝೈದ್ ಖಾನ್ ಜೊತೆ ಸೇರಿ ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದಾರೆ.
ಧನ್ವೀರ್ ಅಸಭ್ಯವಾಗಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿ ನಟ ಝೈದ್ ಖಾನ್ ಬಗ್ಗೆಯೂ ಧನ್ವೀರ್ ಬಾಯಿಗೆ ಬಂದಂತೆ ಮಾತನಾಡಿದ್ದಾರೆ ಎಂಬ ಆರೋಪ ಇದೆ. ಹೀಗಾಗಿ ಇಬ್ಬರು ಜೈಲಿಗೆ ಭೇಟಿ ನೀಡಿ ಧನ್ವೀರ್ ನಡೆಯ ಬಗ್ಗೆ ಮಾತನಾಡಲಿದ್ದಾರೆ.
ಇನ್ನು ವಿಜಯಲಕ್ಷ್ಮಿಗೆ ದೂರವಾಣಿ ಕರೆ ಮೂಲಕ ಬೆದರಿಕೆ ಹಾಗೂ ಕಿರುಕುಳ ನೀಡಿದ್ದಾರೆ ಎಂಬ ಆರೋಪದಡಿ ನಟ ಧನ್ವೀರ್ ವಿರುದ್ಧ ಬೆಂಗಳೂರಿನ ಮೂರು ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಧನ್ವೀರ್ ಹಾಗೂ ವಿಜಯಲಕ್ಷ್ಮಿ ನಡುವಿನ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು ತಮ್ಮ ಬಳಿ ಕೂಡ ಆಡಿಯೋ ದಾಖಲೆಗಳಿವೆ. ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಧನ್ವೀರ್ ಹೇಳಿದ್ದಾರೆ.