ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: 716 ವಿದೇಶಿ ಪ್ರಜೆಗಳ ಹೆಸರು ಡಿಲೀಟ್..!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇಪಾಳದ 17, ಬ್ರಿಟನ್‌ನ 2, ಕೆನಡಾದ 5, ಆಸ್ಟ್ರೇಲಿಯಾದ 6, ಅಮೆರಿಕದ 6 ಹಾಗೂ ನೆದರ್ಲೆಂಡ್ಸ್, ದಕ್ಷಿಣ ಆಫ್ರಿಕಾ, ಐರ್ಲೆಂಡ್ ಮತ್ತು ನಾರ್ವೆ ದೇಶಗಳ ತಲಾ ಒಬ್ಬರು ಸೇರಿದಂತೆ ಒಟ್ಟು 40 ವಿದೇಶಿ ಪ್ರಜೆಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ.
Election Commission and SIR
ಚುನಾವಣಾ ಆಯೋಗದ ಮತದಾರರ ಪಟ್ಟಿ ಪರಿಷ್ಕರಣೆ
Updated on: 

ಬೆಂಗಳೂರು: ಕರ್ನಾಟಕದ ಮತದಾರರ ಪಟ್ಟಿಯಿಂದ ಬರೋಬ್ಬರಿ 716 ವಿದೇಶಿ ಪ್ರಜೆಗಳ ಹೆಸರನ್ನು ಭಾರತೀಯ ಚುನಾವಣಾ ಆಯೋಗವು (ECI) ಕೈಬಿಟ್ಟಿದೆ. ಇತ್ತೀಚೆಗೆ ನಡೆದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನರ್ಹ ಮತದಾರರೆಂದು ಗುರುತಿಸಲಾದ ಒಟ್ಟು 583 ಜನರ ಪೈಕಿ ನೇಪಾಳದ 545 ಪ್ರಜೆಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೇಪಾಳದ 17, ಬ್ರಿಟನ್‌ನ 2, ಕೆನಡಾದ 5, ಆಸ್ಟ್ರೇಲಿಯಾದ 6, ಅಮೆರಿಕದ 6 ಹಾಗೂ ನೆದರ್ಲೆಂಡ್ಸ್, ದಕ್ಷಿಣ ಆಫ್ರಿಕಾ, ಐರ್ಲೆಂಡ್ ಮತ್ತು ನಾರ್ವೆ ದೇಶಗಳ ತಲಾ ಒಬ್ಬರು ಸೇರಿದಂತೆ ಒಟ್ಟು 40 ವಿದೇಶಿ ಪ್ರಜೆಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ನೇಪಾಳ, ಪಾಕಿಸ್ತಾನ, ಅಮೆರಿಕ ಮತ್ತು ಬಾಂಗ್ಲಾದೇಶದ 22 ವಿದೇಶಿ ಪ್ರಜೆಗಳ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ.

Election Commission and SIR
ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಪ್ರಕಟ; ಒಟ್ಟು ಮತದಾರರು 4.55 ಕೋಟಿ, 99 ಲಕ್ಷಕ್ಕೂ ಹೆಚ್ಚು ಹೆಸರು ಡಿಲೀಟ್!

ಉಡುಪಿಯಲ್ಲಿ ನೇಪಾಳ, ಅಮೆರಿಕ, ಬ್ರಿಟನ್, ಫ್ರಾನ್ಸ್ ಮತ್ತು ಕೆನಡಾ ಸೇರಿದಂತೆ ವಿವಿಧ ದೇಶಗಳ 44 ವಿದೇಶಿ ಪ್ರಜೆಗಳ ಹೆಸರುಗಳನ್ನು ಅಳಿಸಲಾಗಿದೆ. ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿಯೂ ನೇಪಾಳ ಹಾಗೂ ಶ್ರೀಲಂಕಾದ ಪ್ರಜೆಗಳು ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವುದು ಪತ್ತೆಯಾಗಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಮೆರಿಕ, ದುಬೈ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಕೆನಡಾದ ಪ್ರಜೆಗಳು ಮತದಾರರ ಗುರುತಿನ ಚೀಟಿ ಹೊಂದಿರುವುದು ಚುನಾವಣಾ ಆಯೋಗದ ಅಧಿಕಾರಿಗಳ ಪರಿಶೀಲನೆಯ ವೇಳೆ ಬೆಳಕಿಗೆ ಬಂದಿದೆ.

2002ರ ಮತದಾರರ ಪಟ್ಟಿಯಲ್ಲಿನ ದಾಖಲೆಗಳೊಂದಿಗೆ ಇವರ ವಿವರಗಳು ಹೊಂದಿಕೆಯಾಗದಿರುವುದು ಹಾಗೂ ವಿಚಾರಣೆ ಪ್ರಕ್ರಿಯೆಯ ಸಂದರ್ಭದಲ್ಲಿ ಸಲ್ಲಿಸಲಾದ ಗಣತಿ ನಮೂನೆಗಳ ಪರಿಶೀಲನೆ ವೇಳೆ ಈ ಪ್ರಕರಣಗಳು ಪತ್ತೆಯಾಗಿವೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ಈ ವ್ಯಕ್ತಿಗಳ ಬಳಿ ಮತದಾರರ ಗುರುತಿನ ಚೀಟಿಗಳಿದ್ದರೂ, ಶಾಲಾ ಪ್ರಮಾಣಪತ್ರ, ಆಸ್ತಿ ದಾಖಲೆಗಳು ಸೇರಿದಂತೆ ಪಟ್ಟಿಯಲ್ಲಿ ನಮೂದಿಸಲಾದ ಇತರ ದಾಖಲೆಗಳ ವಿವರಗಳನ್ನು ಒದಗಿಸಲು ಅವರಿಗೆ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com