Namma Metro ಪಿಂಕ್ ಲೈನ್​​ ಮೇಲ್ಸೇತುವೆ ಎಲಿವೇಟೆಡ್ ಮಾರ್ಗಕ್ಕೆ CMRS ಗ್ರೀನ್ ಸಿಗ್ನಲ್

ಬೆಂಗಳೂರಿನ ಕಲೇನ ಅಗ್ರಹಾರ ಮತ್ತು ತಾವರೆಕೆರೆ ನಡುವಿನ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸೇಫ್ಟಿಯಿಂದ (CMRS) ಒಪ್ಪಿಗೆ ದೊರೆತಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ.
Namma Metro Pink Line
ನಮ್ಮ ಮೆಟ್ರೋ ಪಿಂಕ್ ಲೈನ್
Updated on: 

ಬೆಂಗಳೂರು: ಬೆಂಗಳೂರಿನ ಕಲೇನ ಅಗ್ರಹಾರ ಮತ್ತು ತಾವರೆಕೆರೆ ನಡುವಿನ ನಮ್ಮ ಮೆಟ್ರೋ ಪಿಂಕ್ ಲೈನ್‌ಗೆ ಕಮಿಷನರ್ ಆಫ್ ಮೆಟ್ರೋ ರೈಲ್ವೆ ಸೇಫ್ಟಿಯಿಂದ (CMRS) ಒಪ್ಪಿಗೆ ದೊರೆತಿದೆ. ಈ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ. ಉದ್ಘಾಟನಾ ದಿನಾಂಕವನ್ನು ಘೋಷಿಸುವಂತೆ ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.

ಕಲೇನ ಅಗ್ರಹಾರ ಮತ್ತು ತಾವರೆಕೆರೆ ನಡುವಿನ ಮೆಟ್ರೋ ಪಿಂಕ್ ಲೈನ್‌ನ ಎತ್ತರಿಸಿದ ಮಾರ್ಗಕ್ಕೆ 'ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತ'ರಿಂದ (Commissioner for Metro Railway Safety) ಅನುಮೋದನೆ ಸಿಕ್ಕಿರುವುದು ನಮಗೆ ಸಂತೋಷ ತಂದಿದೆ. ಸಾಕಷ್ಟು ಪ್ರಯತ್ನಗಳ ನಂತರ, ಈಗ ನಮಗೆ ಸುರಕ್ಷತಾ ಅನುಮತಿ ದೊರೆತಿದೆ ಎಂದು ಸಚಿವರು 'ಎಕ್ಸ್' ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಿದ ಕೂಡಲೇ ಸಾರ್ವಜನಿಕ ಸೇವೆಗೆ ಚಾಲನೆ ನೀಡಲು ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸಿದ್ಧವಾಗಿದೆ. ನಾವು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ದಿನಾಂಕವನ್ನು ಕೋರಿದ್ದೇವೆ. ಪಿಂಕ್ ಲೈನ್‌ನ ಈ ಎತ್ತರಿಸಿದ ಮಾರ್ಗವನ್ನು ಉದ್ಘಾಟಿಸಲು ಮತ್ತು ನಮ್ಮ ಮೆಟ್ರೋ ಜಾಲವನ್ನು ವಿಸ್ತರಿಸುವ ಮೂಲಕ ಜನರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಡಲು ನಾವು ಉತ್ಸುಕರಾಗಿದ್ದೇವೆ ಎಂದು ಸಚಿವರು ತಿಳಿಸಿದರು.

Namma Metro Pink Line
ನವೆಂಬರ್ 15ಕ್ಕೆ ಬೆಂಗಳೂರಿಗೆ ಪ್ರಧಾನಿ; ಸರ್ವಪಕ್ಷ ನಿಯೋಗ ಭೇಟಿಗೆ ಸಮಯ ಕೇಳುತ್ತೇನೆ: ಸಿಎಂ ಡಿ.ಕೆ ಶಿವಕುಮಾರ್

ಇನ್ನೂ ಸಾಕಷ್ಟು ಕೆಲಸಗಳು ಬಾಕಿ ಇವೆ ಮತ್ತು ಅವುಗಳನ್ನು ಮುಂದುವರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಪಿಂಕ್ ಲೈನ್ ಕಲೇನ ಅಗ್ರಹಾರದಿಂದ ನಾಗವಾರದವರೆಗೆ 21.25 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ಆಗಿದ್ದು, ಇದರಲ್ಲಿ 18 ನಿಲ್ದಾಣಗಳಿವೆ. ಕಲೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿ.ಮೀ ಎತ್ತರಿಸಿದ ಮಾರ್ಗದಲ್ಲಿ ಆರು ನಿಲ್ದಾಣಗಳಿವೆ. ಇನ್ನು ತಾವರೆಕೆರೆಯಿಂದ ಡೈರಿ ಸರ್ಕಲ್ ಅನ್ನು ಸಂಪರ್ಕಿಸುವ 13.76 ಕಿ.ಮೀ ಉದ್ದದ ಭೂಗತ ಮಾರ್ಗದಲ್ಲಿ 12 ನಿಲ್ದಾಣಗಳಿವೆ.

ಪಿಂಕ್ ಲೈನ್, ಎಂ.ಜಿ. ರಸ್ತೆಯಲ್ಲಿ ಪರ್ಪಲ್ ಲೈನ್ (Purple Line) ಅನ್ನು, ಜಯದೇವ ಆಸ್ಪತ್ರೆಯ ಬಳಿ ಯೆಲ್ಲೋ ಲೈನ್ (Yellow Line) ಅನ್ನು ಮತ್ತು ನಾಗವಾರದಲ್ಲಿ ಬ್ಲೂ ಲೈನ್ (Blue Line - ವಿಮಾನ ನಿಲ್ದಾಣ ಮಾರ್ಗ) ಅನ್ನು ಸಂಪರ್ಕಿಸಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com