ಸ್ಟಿಂಗ್ ಆಪರೇಷನ್ ಕೇವಲ ಕಟ್ಟು ಕಥೆ: ಮಾಜಿ ಸಿಎಂ ಸಿದ್ದರಾಮಯ್ಯಗೆ ಸಿಸಿಬಿ ಕ್ಲೀನ್ ಚಿಟ್!

ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಬಿಂಬಿಸಿರುವಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಕೇವಲ ಕಟ್ಟುಕಥೆಯ ಭಾಗವಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ನಿರೂಪಣೆಯಾಗಿದೆ
Siddaramaiah
ಮಾಜಿ ಸಿಎಂ ಸಿದ್ದರಾಮಯ್ಯ
Updated on: 

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್​​ನಲ್ಲಿ ಬರುವ ಎಲ್ಲ ವಿಚಾರಗಳು ಕೇವಲ ಕಟ್ಟುಕಥೆ ಎಂದು ಪ್ರಕರಣ ತನಿಖೆ ನಡೆಸಿದ ಸಿಸಿಬಿ ಗುರುವಾರ ಹೇಳಿದೆ. ಈ ಮೂಲಕ ಪ್ರಕರಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಸಿಬಿ ಕ್ಲೀನ್ ಚಿಟ್ ನೀಡಿದೆ.

ಸ್ಟಿಂಗ್ ಆಪರೇಷನ್ ಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಬಿಂಬಿಸಿರುವಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಕಟ್ಟುಕಥೆಯ ಭಾಗವಾಗಿದ್ದು, ಉದ್ದೇಶಪೂರ್ವಕವಾಗಿ ಸೃಷ್ಟಿಸಲಾದ ನಿರೂಪಣೆಯಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ ಎಂದು ಸಿಸಿಬಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಡಿಯೋದಲ್ಲಿ ಚಿತ್ರಿಸಿರುವ ರೀತಿಯಲ್ಲಿ ಯಾವುದೇ ಘಟನೆ ನಡೆದಿರುವ ಬಗ್ಗೆ ಈವರೆಗಿನ ತನಿಖೆಯಲ್ಲಿ ದಾಖಲಿಸಲಾದ ಹೇಳಿಕೆಗಳು ಹಾಗೂ ಸಂಗ್ರಹಿಸಲಾದ ಸಾಕ್ಷಾಧಾರಗಳು ದೃಢಪಡಿಸಿಲ್ಲ ಎಂದು ಸಿಸಿಬಿ ಹೇಳಿದೆ.

Siddaramaiah
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ!
Siddaramaiah
ಸ್ಟಿಂಗ್ ಫ್ಯಾಕ್ಟರಿಗಳು ಎಲ್ಲಾ ಕಡೆ ಓಪನ್ ಆಗಿವೆ; ನೋಡಲೂ ಅಸಹ್ಯ, ಕೇಳಲೂ ಅಸಹ್ಯ: ಕೆ.ಎನ್ ರಾಜಣ್ಣ ಹೇಳಿಕೆ

ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಎಲ್ಲಾ ವ್ಯಕ್ತಿಗಳನ್ನು ಗುರುತಿಸಲಾಗಿದ್ದು, ಅವರ ವಿಚಾರಣೆಯನ್ನು ಸಮಗ್ರವಾಗಿ ನಡೆಸಲಾಗಿದೆ. ಕೆಲವರನ್ನು ಒಂದಕ್ಕಿಂತ ಹೆಚ್ಚು ಬಾರಿ ವಿಚಾರಣೆಗೊಳಪಡಿಸಲಾಗಿದೆ. ಅವರ ಹೇಳಿಕೆಗಳು ಹಾಗೂ ಈವರೆಗೆ ಸಂಗ್ರಹಿಸಲಾದ ಸಾಕ್ಷಾಧಾರಗಳ ಆಧಾರದ ಮೇಲೆ, ವಿಡಿಯೋದಲ್ಲಿ ಉಲ್ಲೇಖಿಸಲಾದ ಅಥವಾ ಸೂಚ್ಯವಾಗಿ ಆರೋಪಿಸಲಾದ ವ್ಯಕ್ತಿಗಳ ವಿರುದ್ಧದ ಆರೋಪಗಳು ಸುಳ್ಳು ಹಾಗೂ ಕಟ್ಟುಕಥೆಯಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಎಲ್ಲ ಅಂಶಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಸಿಸಿಬಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com