KPSC: ರಾಜ್ಯ ಸರ್ಕಾರಕ್ಕೆ ಭಾರಿ ಶಾಕ್; ಸುಪ್ರೀಂ ನಲ್ಲಿ 2022 ರ ವಿಶೇಷ ಕಾಯ್ದೆ ರದ್ದು! 362 ಕೆಎಎಸ್ ಅಧಿಕಾರಿಗಳ ನೌಕರಿಗೆ ಕುತ್ತು!

ಹೈಕೋರ್ಟ್‌ನ ಈ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿದಾರರಾದ ಶ್ರೀನಿವಾಸ ಟಿ. ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈಗ ಸುಪ್ರೀಂ ಕೋರ್ಟ್ ಸರ್ಕಾರದ ಕಾಯ್ದೆಯನ್ನು ಸಂಪೂರ್ಣವಾಗಿ ಅಸಿಂಧುಗೊಳಿಸಿ ರದ್ದುಪಡಿಸಿದೆ.
Supreme Court
ಸುಪ್ರೀಂ ಕೋರ್ಟ್ online desk
Updated on: 

ನವದೆಹಲಿ: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ(Gazetted Probationers) ಹುದ್ದೆಗಳ ನೇಮಕಾತಿ ವಿವಾದದಲ್ಲಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ತೀರ್ಪು ನೀಡಿದ್ದು, ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ.

ಈ ಪ್ರಕರಾಣದ ಸಂಬಂಧ ಒಂದು ದಶಕಕ್ಕೂ ಹೆಚ್ಚು ಕಾಲದಿಂದ ಕಾನೂನು ಹೋರಾಟ ನಡೆಯುತ್ತಿತ್ತು. 2011 ರ ಈ ನೇಮಕಾತಿ ಪಟ್ಟಿಯನ್ನು ಊರ್ಜಿತಗೊಳಿಸಲು ರಾಜ್ಯ ಸರ್ಕಾರ 2022ರಲ್ಲಿ ವಿಶೇಷ ಕಾಯ್ದೆಯನ್ನು ಜಾರಿಗೆ ತಂದಿತ್ತು. ಈಗ ಈ ಕಾಯ್ದೆಯನ್ನೇ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಪರಿಣಾಮ ಅಂದು ನೇಮಕವಾಗಿದ್ದ 362 ಕೆಎಎಸ್ ಅಧಿಕಾರಿಗಳ ನೌಕರಿಗೆ ನೇರ ಕುತ್ತು ಬಂದಿದೆ.

Supreme Court
ಸುಧಾರಣೆ ಜಾರಿಗೊಳಿಸುವವರೆಗೂ KPSC ಪರೀಕ್ಷೆ ನಡೆಸಬೇಡಿ: ಸರ್ಕಾರಕ್ಕೆ ಉದ್ಯೋಗಾಕಾಂಕ್ಷಿಗಳ ಸಲಹೆ

ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಹಾಗೂ ವಿನೋದ್ ಚಂದ್ರನ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ ಈ ಮಹತ್ವದ ಆದೇಶ ಪ್ರಕಟಿಸಿದೆ. 2011ರ ಸಾಲಿನ ಕೆಪಿಎಸ್‌ಸಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕಾರಣದಿಂದ ಈ ಹಿಂದೆ ಹೈಕೋರ್ಟ್ ಆಯ್ಕೆ ಪಟ್ಟಿಯನ್ನು ರದ್ದುಪಡಿಸಿತ್ತು. ಆದರೆ ಈ ಆಯ್ಕೆ ಪಟ್ಟಿಯನ್ನು ರಕ್ಷಿಸುವ ಸಲುವಾಗಿ ರಾಜ್ಯ ಸರ್ಕಾರ 2022ರಲ್ಲಿ ವಿಶೇಷ ಕಾಯ್ದೆಯನ್ನು ಜಾರಿಗೆ ತಂದಿತ್ತು. ಸರ್ಕಾರದ ಈ ಕಾಯ್ದೆಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು.

ಹೈಕೋರ್ಟ್‌ನ ಈ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿದಾರರಾದ ಶ್ರೀನಿವಾಸ ಟಿ. ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈಗ ಸುಪ್ರೀಂ ಕೋರ್ಟ್ ಸರ್ಕಾರದ ಕಾಯ್ದೆಯನ್ನು ಸಂಪೂರ್ಣವಾಗಿ ಅಸಿಂಧುಗೊಳಿಸಿ ರದ್ದುಪಡಿಸಿದೆ.

2011ರಲ್ಲಿ ಕೆಪಿಎಸ್‌ಸಿ ಮೂಲಕ ನಡೆದ ಈ ನೇಮಕಾತಿಯಲ್ಲಿ ಸಂದರ್ಶನ ಮತ್ತು ಅಂಕ ಹಂಚಿಕೆಯಲ್ಲಿ ಭಾರೀ ಭ್ರಷ್ಟಾಚಾರ ಹಾಗೂ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ವಿವಾದದ ನಡುವೆಯೂ ನೇಮಕಗೊಂಡಿದ್ದ 363 KAS ಅಧಿಕಾರಿಗಳು ಪ್ರಸ್ತುತ ವಿವಿಧ ಇಲಾಖೆಗಳಲ್ಲಿ ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅವರ ಭವಿಷ್ಯ ಅತಂತ್ರವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com