ನಟ ದರ್ಶನ್‌ಗೆ ಮತ್ತೆ ತೀವ್ರ ಬೆನ್ನು ನೋವು: ಫಿಸಿಯೋಥೆರಪಿಗೆ ಅನುಮತಿ ಕೋರಿ ಕೋರ್ಟ್‌ಗೆ ಅರ್ಜಿ!

'ಫಿಸಿಯೋಥೆರಪಿ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಒಂದು ತಿಂಗಳ ಹಿಂದೆಯೇ ಜೈಲು ಅಧೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದ್ದೆ. ಆದಾಗ್ಯೂ ಜೈಲು ಅಧಿಕಾರಿಗಳು ಯಾವುದೇ ವೈದ್ಯಕೀಯ ಸೌಲಭ್ಯ ಕಲ್ಪಿಸಿಲ್ಲ' ಎಂದಿದ್ದಾರೆ.
Actor Darshan
ನಟ ದರ್ಶನ್‌ಗೆ ಮತ್ತೆ ಬೆನ್ನುನೋವು
Updated on: 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ತೀವ್ರ ಬೆನ್ನುನೋವಿನಿಂದ ಬಳಲುತ್ತಿದ್ದು, ಜೈಲಿನಲ್ಲಿಯೇ ಫಿಸಿಯೋಥೆರಪಿ ಚಿಕಿತ್ಸೆ ಪಡೆಯಲು ಅನುಮತಿ ನೀಡುವಂತೆ ಕೋರಿ ಅವರ ಪರ ವಕೀಲರು 58ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆಯಷ್ಟೇ (ಅಕ್ಟೋಬರ್ 28) ವಿಚಾರಣೆ ವೇಳೆ ನಟ ದರ್ಶನ್ ಅವರೇ ನ್ಯಾಯಾಧೀಶರ ಮುಂದೆ ತಮ್ಮ ಬೆನ್ನುನೋವಿನ ಸಮಸ್ಯೆಯನ್ನು ತೋಡಿಕೊಂಡು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನ್ಯಾಯಾಧೀಶರು, ವಕೀಲರ ಮೂಲಕ ಅಧಿಕೃತವಾಗಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದ್ದರು.

ನ್ಯಾಯಾಲಯದ ಸೂಚನೆ ಮೇರೆಗೆ ದರ್ಶನ್ ಪರ ವಕೀಲರು ಇಂದು ಅರ್ಜಿ ಸಲ್ಲಿಸಿದ್ದು, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿ ಕಾಲಾವಕಾಶ ಕೋರಿದ್ದಾರೆ. ಜಡ್ಜ್ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಈಗ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆ ನೀಡಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅರ್ಜಿಯಲ್ಲಿ ನಟ ದರ್ಶನ್, 'ಕಳೆದ 12 ವರ್ಷಗಳಿಂದ ಬೆನ್ನುನೋವಿನ ಸಮಸ್ಯೆಯಿಂದ ನರಳುತ್ತಿದ್ದೇನೆ. ನನ್ನ ಬೆನ್ನುಹುರಿಯ ಎಲ್4 ಹಾಗೂ ಎಲ್5 ಭಾಗದಲ್ಲಿ ಗಂಭೀರ ಸಮಸ್ಯೆ ಇದೆ. ಈ ನೋವಿನ ನಿವಾರಣೆಗೆ ಈ ಹಿಂದೆ ಸ್ಟೀರಾಯ್ಡ್ ಇಂಜೆಕ್ಷನ್‌ಗಳನ್ನೂ ಪಡೆದುಕೊಂಡಿದ್ದೇನೆ. ವಿಶೇಷವಾಗಿ ಚಳಿಗಾಲ ಆರಂಭವಾದರೆ ಈ ನೋವು ಮಿತಿಮೀರುತ್ತದೆ. ಕಳೆದ ಒಂದು ತಿಂಗಳಿಂದ ನೋವು ವಿಪರೀತವಾಗಿದ್ದು, ಸರಿಯಾಗಿ ಕುಳಿತುಕೊಳ್ಳಲು, ನಿಲ್ಲಲು ಹಾಗೂ ಮಲಗಲೂ ಸಾಧ್ಯವಾಗುತ್ತಿಲ್ಲ' ಎಂದಿದ್ದಾರೆ.

Actor Darshan
ರೇಣುಕಾಸ್ವಾಮಿ ಕೊಲೆ ಕೇಸ್: ಪಟ್ಟಣಗೆರೆ ಶೆಡ್‌ಗೆ ದರ್ಶನ್, ಪವಿತ್ರಾ ಬಂದೇ ಇಲ್ಲ - ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಐ ವಿಟ್ನೆಸ್‌!

'ಫಿಸಿಯೋಥೆರಪಿ ಚಿಕಿತ್ಸೆಗೆ ಅವಕಾಶ ಕಲ್ಪಿಸುವಂತೆ ಒಂದು ತಿಂಗಳ ಹಿಂದೆಯೇ ಜೈಲು ಅಧೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದ್ದೆ. ಆದಾಗ್ಯೂ ಜೈಲು ಅಧಿಕಾರಿಗಳು ಯಾವುದೇ ವೈದ್ಯಕೀಯ ಸೌಲಭ್ಯ ಕಲ್ಪಿಸಿಲ್ಲ. ಆದ್ದರಿಂದ ತಮಗೆ ಸೂಕ್ತ ಫಿಸಿಯೋಥೆರಪಿ ಚಿಕಿತ್ಸೆ ಕೊಡಿಸಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು' ಎಂದು ನ್ಯಾಯಾಲಯವನ್ನು ಕೋರಿದ್ದಾರೆ.

ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ವಿಶೇಷ ಸಾರ್ವಜನಿಕ ಅಭಿಯೋಜಕರು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯವು ಸೋಮವಾರಕ್ಕೆ (ನವೆಬರ್ 2) ಮುಂದೂಡಿದೆ. ಅಲ್ಲಿಯವರೆಗೆ ದರ್ಶನ್‌ಗೆ ಅಗತ್ಯವಿರುವ ಪ್ರಾಥಮಿಕ ಚಿಕಿತ್ಸೆ ನೀಡುವಂತೆ ನ್ಯಾಯಾಲಯ ಮೌಖಿಕವಾಗಿ ಸೂಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com