ಮಾಜಿ ಸಚಿವ, ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ನಿಧನ

ಜನತಾ ದಳ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿ ಅವರು ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
Shivanand Koujalagi
ಶಿವಾನಂದ ಕೌಜಲಗಿ
Updated on: 

ಬೈಲಹೊಂಗಲ: ಮಾಜಿ ಸಚಿವ ಹಾಗೂ ಹಿರಿಯ ರಾಜಕಾರಣಿ ಶಿವಾನಂದ ಕೌಜಲಗಿ ಅವರು ಶುಕ್ರವಾರ ನಿಧನರಾಗಿದ್ದಾರೆ.

ಜನತಾ ದಳ ಸರ್ಕಾರದ ಅವಧಿಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿ ಅವರು ಸೇವೆ ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, ಕೆಎಲ್‌ಇ ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

ಶಿವಾನಂದ ಕೌಜಲಗಿ ಅವರು ಪತ್ನಿ ಹಾಗೂ ಪುತ್ರರಾದ ಶಾಸಕ ಮಹಾಂತೇಶ ಕೌಜಲಗಿ ಮತ್ತು ಕಾಂಗ್ರೆಸ್ ಮುಖಂಡ ಬಸವರಾಜ ಕೌಜಲಗಿ ಅವರನ್ನು ಅಗಲಿದ್ದಾರೆ. ಶನಿವಾರ ಬೆಳಗ್ಗೆ 11 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿವೆ.

Shivanand Koujalagi
'A' ಸಿನಿಮಾ ನಿರ್ಮಾಪಕ ಸಿಲ್ಕ್ ಮಂಜು ನಿಧನ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X