ಕೋರಮಂಗಲ: ರಸ್ತೆಯಲ್ಲೇ ಹೊತ್ತಿ ಉರಿದ BMTC ಬಸ್; ತಪ್ಪಿದ ದೊಡ್ಡ ಅನಾಹುತ!

ಇಂದು ಮಧ್ಯಾಹ್ನ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ.
Bengaluru: Fire breaks out in moving BMTC bus in Koramangala
ಹೊತ್ತಿ ಉರಿದ BMTC ಬಸ್
Updated on: 

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೋರಮಂಗಲದಲ್ಲಿ ಶನಿವಾರ ಬಿಎಂಟಿಸಿ ಬಸ್ಸೊಂದು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮಧ್ಯಾಹ್ನ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಮತ್ತು ನಿರ್ವಾಹಕರು ತಕ್ಷಣ ಸಮಯ ಪ್ರಜ್ಞೆ ಮೆರೆದು ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಬಸ್‌ನಿಂದ ಕೆಳಗಿಳಿಸಿದ್ದಾರೆ.

ಮೊದಲು ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಹೊಗೆಯು ಕೆಲವೇ ಕ್ಷಣಗಳಲ್ಲಿ ಬಸ್ ಅನ್ನು ಸಂಪೂರ್ಣವಾಗಿ ಆವರಿಸಿಕೊಂಡಿದೆ.

Bengaluru: Fire breaks out in moving BMTC bus in Koramangala
ಬೆಂಗಳೂರು: ಕಮಿಷನರ್ ಕಚೇರಿ ಹೊರಗೆ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಟೊಯೋಟಾ ಕಾರು

ಈ ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ತಾಂತ್ರಿಕ ದೋಷವೇ ಇದಕ್ಕೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X