ಹಾಲಿನ ದರ ಏರಿಕೆ ಮಾಡಿದ್ದೇಕೆ?; ಸಿಎಂ ಡಿ ಕೆ ಶಿವಕುಮಾರ್ ಕೊಟ್ಟ ಕಾರಣ ಹೀಗಿದೆ; Video

ನಮ್ಮ ಹೈನುಗಾರರ ಜೀವನೋಪಾಯವನ್ನು ರಕ್ಷಿಸುವ ಹಾಗೂ ಗ್ರಾಹಕರಿಗೆ ‘ನಂದಿನಿ’ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಸದಾ ಬದ್ಧವಾಗಿದೆ. ದರ ಏರಿಕೆಗೆ ಕಾರವೇನೆಂದು ಹೇಳಿದ್ದಾರೆ.
D K Shivakumar
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್
Updated on: 

ಬೆಂಗಳೂರು: ಹಾಲು ಮತ್ತು ಮೊಸರಿನ ದರ ನಾಳೆ ನವಂಬರ್ 1ರಿಂದ ಏರಿಕೆಯಾಗುತ್ತಿದೆ. ಈ ಬಗ್ಗೆ ವಿಪಕ್ಷಗಳು, ಜನಸಾಮಾನ್ಯರು ಸರ್ಕಾರದ ನಿರ್ಧಾರ ಬಗ್ಗೆ ತೀವ್ರ ಟೀಕೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸರ್ಕಾರದ ನಿರ್ಧಾರವನ್ನು ಸಿಎಂ ಡಿ.ಕೆ. ಶಿವಕುಮಾರ್​​ ಸಮರ್ಥಿಸಿಕೊಂಡಿದ್ದಾರೆ.

ನಮ್ಮ ಹೈನುಗಾರರ ಜೀವನೋಪಾಯವನ್ನು ರಕ್ಷಿಸುವ ಹಾಗೂ ಗ್ರಾಹಕರಿಗೆ ‘ನಂದಿನಿ’ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಸದಾ ಬದ್ಧವಾಗಿದೆ. ದರ ಏರಿಕೆಗೆ ಕಾರವೇನೆಂದು ಅವರು ಹೇಳಿದ್ದಾರೆ.

D K Shivakumar
ಹಾಲಿನ ದರ ಏರಿಕೆ ಬಹುದಿನಗಳ ಬೇಡಿಕೆ; ಹೆಚ್ಚುವರಿ ಹಣ ರೈತರಿಗೆ ತಲುಪಲಿದೆ: ಸಿಎಂ ಡಿ.ಕೆ ಶಿವಕುಮಾರ್; Video

ನವೆಂಬರ್ 1ರಿಂದ ಅನ್ವಯವಾಗುವಂತೆ ಪ್ರತಿ ಲೀಟರ್ ಹಾಲಿನ ದರವನ್ನು 8 ರೂಪಾಯಿ, ಮೊಸರಿನ ದರ ಲೀಟರ್ ಗೆ 14 ರೂಪಾಯಿ ಹೆಚ್ಚಿಸಲಾಗಿದೆ. ಅದಕ್ಕೆ ಕಾರಣವೇನೆಂದು ಹೇಳಿರುವ ಡಿ ಕೆ ಶಿವಕುಮಾರ್, ಜಾನುವಾರುಗಳ ಮೇವು ಮತ್ತು ಹಿಂಡಿ ದರದಲ್ಲಿನ ಹೆಚ್ಚಳ, ಇಂಧನ ಹಾಗೂ ಪ್ಯಾಕೇಜಿಂಗ್ ವೆಚ್ಚದ ಏರಿಕೆ ಮತ್ತು ಬರಗಾಲದ ಪರಿಣಾಮವಾಗಿ ದೈನಂದಿನ ಹಾಲಿನ ಸಂಗ್ರಹಣೆಯಲ್ಲಿ ಉಂಟಾಗಿರುವ ಕುಸಿತ ಈ ಅನಿವಾರ್ಯ ಪರಿಷ್ಕರಣೆಗೆ ಪ್ರಮುಖ ಕಾರಣಗಳಾಗಿವೆ ಎಂದು ಹೇಳಿದ್ದಾರೆ.

ಈ 8 ರೂಪಾಯಿ ಹೆಚ್ಚಳದಲ್ಲಿ 7 ರೂಪಾಯಿ ನೇರವಾಗಿ ರೈತರಿಗೆ ತಲುಪಲಿದ್ದು, ಪ್ರತಿ ಲೀಟರ್‌ಗೆ 35ರಿಂದ 42ಕ್ಕೆ ಏರಿಕೆಯಾಗಲಿದೆ. ಸರ್ಕಾರ ನೀಡುವ 5 ರೂ ಪ್ರೋತ್ಸಾಹಧನ ಸೇರಿ ರೈತರಿಗೆ ಪ್ರತಿ ಲೀಟರ್ ಹಾಲಿಗೆ 47 ರೂಪಾಯಿ ಕೈಸೇರಲಿದೆ.

D K Shivakumar
ನಂದಿನಿ ಗ್ರಾಹಕರ ಜೇಬಿಗೆ ಕತ್ತರಿ; ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವನ್ನೂ ಪರಿಷ್ಕರಿಸಿದ ಕೆಎಂಎಫ್, ಪ್ರತಿ ಲೀಟರ್‌ಗೆ 14 ರೂ. ಹೆಚ್ಚಳ..!

ಇದರಿಂದ ದಿನಕ್ಕೆ 10 ಲೀಟರ್ ಹಾಲು ಪೂರೈಸುವ ರೈತನಿಗೆ ತಿಂಗಳಿಗೆ ಸುಮಾರು 2,100 ರೂಪಾಯಿ ಹೆಚ್ಚುವರಿ ಆದಾಯ ದೊರೆಯಲಿದೆ. ಅಲ್ಲದೆ, ಈ ದರ ಪರಿಷ್ಕರಣೆಯಿಂದ ರಾಜ್ಯದ ಗ್ರಾಮೀಣ ಹೈನುಗಾರರ ಕುಟುಂಬಗಳಿಗೆ ವಾರ್ಷಿಕ ಅಂದಾಜು 1,850 ಕೋಟಿ ರೂಪಾಯಿಯಿಂದ 2,100 ಕೋಟಿವರೆಗೆ ಹೆಚ್ಚುವರಿ ಆದಾಯ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕಡಿಮೆ ಬೆಲೆ

ಕರ್ನಾಟಕದಲ್ಲಿ ಒಟ್ಟು 28.84 ಲಕ್ಷ ಹೈನುಗಾರರಿದ್ದು, ಕೆಎಂಎಫ್ ಸದಸ್ಯರಲ್ಲಿ ಶೇ.67ರಷ್ಟು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದಾರೆ. ಅವರ ಪರಿಶ್ರಮಕ್ಕೆ ನ್ಯಾಯಯುತ ಪ್ರತಿಫಲ ಒದಗಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಹತ್ವದ ಹೆಜ್ಜೆಯಾಗಿದೆ. ದರ ಪರಿಷ್ಕರಣೆಯ ನಂತರವೂ ನಂದಿನಿ ಟೋನ್ಡ್ ಹಾಲಿನ ದರ ಪ್ರತಿ ಲೀಟರ್‌ಗೆ 54 ರೂ ಇದ್ದು, ದೇಶದ ಹಲವು ಪ್ರಮುಖ ಡೈರಿ ಬ್ರ್ಯಾಂಡ್‌ಗಳಿಗಿಂತ ಕಡಿಮೆಯಿದೆ. ಅದೇ ರೀತಿ ನಂದಿನಿ ಶುಭಂ ಹಾಲಿನ ದರ 60 ರೂ ಇದ್ದು, ಇತರೆ ಹತ್ತು ರಾಜ್ಯಗಳ ಸರಾಸರಿ ದರವಾದ 62.80ಕ್ಕಿಂತ ಕಡಿಮೆಯೇ ಇದೆ. ರೈತರ ಹಿತದ ರಕ್ಷಣೆ ಮತ್ತು ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಹಾಲಿನ ಪೂರೈಕೆ, ಇವೆರಡಕ್ಕೂ ನಮ್ಮ ಸರ್ಕಾರ ಬದ್ಧ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X