ಮಂಡ್ಯ: ವರುಣ ನಾಲೆಯಲ್ಲಿ ಈಜಲು ತೆರಳಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು, ಮತ್ತೋರ್ವನಿಗಾಗಿ ಶೋಧ

ಮೃತ ವಿದ್ಯಾರ್ಥಿಯನ್ನು ಅರ್ಜುನ್ ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ಮತ್ತೊಬ್ಬ ವಿದ್ಯಾರ್ಥಿ ಪಾರ್ಥಸಾರಥಿಯ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
Engineering Student
ಈಜಲು ಹೋಗಿ ನಾಪತ್ತೆಯಾದ ವಿದ್ಯಾರ್ಥಿಗಳು
Updated on: 

ಮಂಡ್ಯ: ವರುಣ ನಾಲೆಯಲ್ಲಿ ಈಜಲು ತೆರಳಿದ್ದ ಮೈಸೂರಿನ ಖಾಸಗಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿದೆ. ಮತ್ತೋರ್ವ ವಿದ್ಯಾರ್ಥಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಮೃತ ವಿದ್ಯಾರ್ಥಿಯನ್ನು ಅರ್ಜುನ್ ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ಮತ್ತೊಬ್ಬ ವಿದ್ಯಾರ್ಥಿ ಪಾರ್ಥಸಾರಥಿಯ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.

ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಸಾಗರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗೊಳ ಪಂಪ್‌ಲೈನ್ ರಸ್ತೆಯ ವರುಣ ನಾಲೆಯಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಮೂರನೇ ವರ್ಷದ ಬಿ.ಇ (ಎಂಜಿನಿಯರಿಂಗ್) ಅಭ್ಯಾಸ ಮಾಡುತ್ತಿದ್ದ ಪಾರ್ಥಸಾರಥಿ ಮತ್ತು ಅರ್ಜುನ್ ಶುಕ್ರವಾರ ಸ್ನೇಹಿತರೊಂದಿಗೆ ವರುಣ ನಾಲೆಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ನಾಲೆಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರೂ ಅದನ್ನು ಲೆಕ್ಕಿಸದೆ ಇವರಿಬ್ಬರೂ ನೀರಿಗೆ ಇಳಿದಿದ್ದಾರೆ. ಈ ವೇಳೆ ನೀರಿನ ರಭಸಕ್ಕೆ ಸಿಲುಕಿ ಇಬ್ಬರೂ ಕೊಚ್ಚಿ ಹೋಗಿದ್ದಾರೆ. ಕೂಡಲೇ ಎಚ್ಚೆತ್ತ ಉಳಿದ ಸ್ನೇಹಿತರು ಸ್ಥಳೀಯರಿಗೆ ಮತ್ತು ಅಗ್ನಿಶಾಮಕ ದಳಕ್ಕೆ ವಿಷಯ ಮುಟ್ಟಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ತುರ್ತು ರಕ್ಷಣಾ ತಂಡವು ಶೋಧ ಕಾರ್ಯ ನಡೆಸಿ, ಇಂದು ಅರ್ಜುನ್ ಮೃತದೇಹವನ್ನು ನಾಲೆಯಿಂದ ಹೊರತೆಗೆದಿದ್ದಾರೆ.

Engineering Student
ಬಳ್ಳಾರಿ: ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆ

ಆದರೆ, ನಾಪತ್ತೆಯಾಗಿರುವ ಮತ್ತೊಬ್ಬ ವಿದ್ಯಾರ್ಥಿ ಪಾರ್ಥಸಾರಥಿಯ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ. ಈ ಕುರಿತು ಕೆ.ಆರ್.ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X