ಹಿಂದುತ್ವ, ಸಂಸ್ಕೃತ ನಿಂದಿಸಿ ವಿವಾದಾತ್ಮಕ ಬರಹ ಆರೋಪ; ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಸುರೇಶ್ ಕುಮಾರ್ ಆಗ್ರಹ

ಆಗಸ್ಟ್ 30ರಂದು ಸಂಸ್ಕೃತ ಭಾಷೆಯ ಕುರಿತು ಆಕ್ಷೇಪಾರ್ಹ ಅಭಿಪ್ರಾಯವನ್ನು ವ್ಯಕ್ತಪಡಿಸುವ ಪೋಸ್ಟ್‌ವೊಂದು ಈ ಖಾತೆಯಲ್ಲಿ ಪ್ರಕಟವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.
MLA Suresh Kumar
ಶಾಸಕ ಸುರೇಶ್ ಕುಮಾರ್
Updated on

ಬೆಂಗಳೂರು: ಸಂಸ್ಕೃತ ಭಾಷೆ ಹಾಗೂ ಹಿಂದುತ್ವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹಗಳನ್ನು ಹಂಚಿಕೊಂಡಿರುವ ಆರೋಪವು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರ ವಿರುದ್ಧ ಕೇಳಿಬಂದಿದೆ.

ಕಾಣಿಯೂರು ಉಪ ವಲಯ ಅರಣ್ಯ ಅಧಿಕಾರಿ ಎಂದು ಹೇಳಿಕೊಳ್ಳುತ್ತಿರುವ ಸಂಜೀವ್ ಪೂಜಾರಿ ಅವರ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಯಲ್ಲಿನ ಕೆಲವು ಪೋಸ್ಟ್‌ಗಳು ಇದೀಗ ವಿವಾದಕ್ಕೆ ಕಾರಣವಾಗಿವೆ.

ಆಗಸ್ಟ್ 30ರಂದು ಸಂಸ್ಕೃತ ಭಾಷೆಯ ಕುರಿತು ಆಕ್ಷೇಪಾರ್ಹ ಅಭಿಪ್ರಾಯವನ್ನು ವ್ಯಕ್ತಪಡಿಸುವ ಪೋಸ್ಟ್‌ವೊಂದು ಈ ಖಾತೆಯಲ್ಲಿ ಪ್ರಕಟವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿದೆ.

ಇದಲ್ಲದೆ ಹಿಂದುತ್ವ, ಸನಾತನ ಧರ್ಮ, ಮೂರ್ತಿ ಪೂಜೆ, ಜಾತಿ ಪದ್ಧತಿ ಹಾಗೂ ಕರ್ಮ ಸಿದ್ಧಾಂತದ ಕುರಿತು ಹಲವು ಬರಹಗಳನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಸರ್ಕಾರಿ ಅಧಿಕಾರಿಯೊಬ್ಬರ ಹೆಸರಿನಲ್ಲಿರುವ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಇಂತಹ ಬರಹಗಳು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

MLA Suresh Kumar
'ಹಿಂದುತ್ವ ಅಂತಿದ್ದೋರ ರೆಕ್ಕೆ-ಪುಕ್ಕ ಕಟ್ ಮಾಡಿ ಅನಂತ್ ಕುಮಾರ್ ಹೆಗ್ಡೆ ಎಲ್ಲರನ್ನು ಮುಗ್ಸಿದ್ದಾರೆ; ಈಶ್ವರಪ್ಪ ಸ್ವಲ್ಪ ಚಿಗುರಿಕೊಂಡಿದ್ದಾರೆ'!

ಈ ಕುರಿತು ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು, ಸರ್ಕಾರಿ ಸೇವೆಯಲ್ಲಿರುವ ಅಧಿಕಾರಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅಥವಾ ನಿರ್ದಿಷ್ಟ ಸಿದ್ಧಾಂತ ಹಾಗೂ ಭಾಷೆಯನ್ನು ಅವಹೇಳನ ಮಾಡುವ ರೀತಿಯಲ್ಲಿ ವರ್ತಿಸುವಂತಿಲ್ಲ.

ಸಂಜೀವ್ ಪೂಜಾರಿ ಎಂಬ ವ್ಯಕ್ತಿ ನಿಜವಾಗಿಯೂ ಅರಣ್ಯ ಇಲಾಖೆಯ ಅಧಿಕಾರಿಯಾಗಿದ್ದರೆ, ಸರ್ಕಾರಿ ನೌಕರರ ಸೇವಾ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಈ ನಡುವೆ ಅಧಿಕಾರಿಯ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪ್ರಕಟವಾಗಿರುವ ಬರಹಗಳ ಕುರಿತು ಸೂಕ್ತ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com