KAS Recruitment 2026: 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7, 2026ರವರೆಗೆ ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದೆ.
kpsc
ಕರ್ನಾಟಕ ಲೋಕಸೇವಾ ಆಯೋಗ
Updated on

ಬೆಂಗಳೂರು: 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 319 ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 7, 2026ರವರೆಗೆ ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಪ್ರಕಟಣೆ ಹೊರಡಿಸಿದೆ.

​ಕರ್ನಾಟಕ ಲೋಕಸೇವಾ ಆಯೋಗವು ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 319 ಹುದ್ದೆಗಳಿಗೆ (ಉಳಿಕೆ ಮೂಲ ವೃಂದ 297 + ಹೈದ್ರಾಬಾದ್-ಕರ್ನಾಟಕ ವೃಂದ 22) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ 31-07-2026ರಂದು ಅಧಿಸೂಚನೆ ಹೊರಡಿಸಿತ್ತು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಗಸ್ಟ್ 1 ರಿಂದ ಆಗಸ್ಟ್ 31, 2026 ರವರೆಗೆ ಕಾಲಾವಕಾಶ ನೀಡಲಾಗಿತ್ತು.

​ಆದರೆ, ಕೆಲವು ಅಭ್ಯರ್ಥಿಗಳು ಜಾತಿ ಆದಾಯ ಮತ್ತು ಒಳ ಮೀಸಲಾತಿ ಪ್ರಮಾಣ ಪತ್ರಗಳ ವಿತರಣೆಗೆ ಸಂಬಂಧಿಸಿದಂತೆ ನಾಡಕಛೇರಿ ಹಾಗೂ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸರ್ವರ್ ಸಮಸ್ಯೆಯಿಂದಾಗಿ ನಿಗದಿತ ಸಮಯಕ್ಕೆ ಪ್ರಮಾಣ ಪತ್ರಗಳು ದೊರೆಯುತ್ತಿಲ್ಲ. ಜೊತೆಗೆ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಇಂಟರ್‌ನೆಟ್ ಸಂಪರ್ಕದ ಕೊರತೆಯಿಂದಾಗಿ ಶುಲ್ಕ ಪಾವತಿಯಲ್ಲಿ ವೈಫಲ್ಯ ಉಂಟಾಗಿತ್ತು.

Attachment
PDF
corrigendum notification GP-2026
Preview

ಈ ಎಲ್ಲಾ ಕಾರಣಗಳಿಂದಾಗಿ ಅನೇಕ ಅಭ್ಯರ್ಥಿಗಳು ನಿಗದಿತ ಅವಧಿಯಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಲು ಸಾಧ್ಯವಾಗದೆ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು.

kpsc
KPSC ಕಿಂಗ್ ಪಿನ್ ಕನ್ನಾಳೆ ಬಾಯಿಗೆ ಸ್ವೀಟ್ ತಿನ್ನಿಸಿದ ಸಚಿವ ಈಶ್ವರ ಖಂಡ್ರೆ: ಸ್ಪಷ್ಟನೆಗೆ ಭಗವಂತ ಖೂಬಾ ಆಗ್ರಹ

ಅಭ್ಯರ್ಥಿಗಳಿಂದ ಬಂದ ಮನವಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಲೋಕಸೇವಾ ಆಯೋಗವು, ಅಭ್ಯರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 07-09-2026ರವರೆಗೆ ವಿಸ್ತರಿಸಿ ಆದೇಶಿಸಲಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜ್ಯೋತಿ ಕೆ‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com